ಮೈಸೂರು: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಮನೆಯನ್ನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಲು ವಂಚಕನ ಜೊತೆ ಕೈ ಜೋಡಿಸಿದ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವ್ಯವಸ್ಥಾಪಕ ಸೋಮಸುಂದ್ರು ಅವರನ್ನು ಅಮಾನತ್ತು ಮಾಡಿ ಮುಡಾ ಆಯುಕ್ತ ಎ.ಎನ್.ರಘುನಂದನ್ ಆದೇಶ ಹೊರಡಿಸಿದ್ದಾರೆ.
ಆರ್‌ಟಿಜಿ ಕಾರ್ಯಕರ್ತ ಬಿ.ಎನ್.ನಾಗೇಂದ್ರ ದಾಖಲೆ ಸಮೇತ ನೀಡಿದ ದೂರಿನ ಹಿನ್ನಲೆ ಪರಿಶೀಲನೆ ನಡೆಸಿದ ಕಾರ್ಯದರ್ಶಿ ಪ್ರಸನ್ನ ಕುಮಾರ್ ನೀಡಿದ ವರದಿ ಆಧಾರದ ಮೇಲೆ ಆಯುಕ್ತರು ಈ ಕ್ರಮ ಕೈಗೊಂಡಿದ್ದಾರೆ.
ಗೋಕುಲಂ 3ನೇ ಹಂತ ಬಡಾವಣೆಯ ಮಾದರಿ ಮನೆ ನಂ 867 ರ 30*40 ವಿಸ್ತೀರ್ಣದ ಸ್ವತ್ತು ಲಿಲಿಯನ್ ಶಾರದಾ ಜೋಸೆಫ್ ರವರಿಗೆ 2-11-1982 ರಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಮಂಜೂರಾಗಿದ್ದು ಕರಾರು ಪತ್ರ ನೀಡಲಾಗಿದೆ. ಆದರೆ, ಹಕ್ಕುಪತ್ರ ವಿತರಣೆ ಆಗಿರುವುದಿಲ್ಲ. ಲಿಲಿಯನ್ ಶಾರದಾ ಜೋಸೆಫ್ ಅವರು 3-9-1983 ರಂದು ಮರಣ ಹೊಂದಿರುತ್ತಾರೆ. ಈ ಸ್ವತ್ತು 6-4-2025ರವರೆಗೂ ಪ್ರಾಧಿಕಾರದಿಂದ ಯಾರಿಗೂ ವರ್ಗಾವಣೆ ಆಗಿರುವುದಿಲ್ಲ. 26-03-2024 ರಂದು ಲಿಲಿಯನ್ ಶಾರದಾ ಜೋಸೆಫ್ ರವರ ಕ್ರಮಬದ್ದ ವಾರಸುದಾರರಲ್ಲದ ವ್ಯಕ್ತಿಗೆ ಅಂದರೆ ನೆವಿಲ್ ಮಾರ್ಕಸ್ ಜೋಸೆಫ್‌ಗೆ ಪೌತಿ ಖಾತೆ ಮಾಡಿಕೊಟ್ಟು ಗೋಲ್‌ಮಾಲ್ ನಡೆದಿದೆ. ಕ್ರಮಬದ್ದವಾಗಿ ವಂಶವೃಕ್ಷ ಪಡೆಯದೆ ನಕಲಿ ದಾಖಲೆ ಸೃಷ್ಟಿಸಿ ನಕಲಿ ವಾರಸುದಾರರಿಗೆ ಪೌತಿಖಾತೆ ಮಾಡಲಾಗಿದೆ. ಪೌತಿಖಾತೆ ಮಾಡಲು ಮನಸೋ ಇಚ್ಛೆ ಕಚೇರಿ ಟಿಪ್ಪಣಿಗಳನ್ನು ಸೃಷ್ಟಿಸಲಾಗಿದೆ. ಅಲ್ಲದೇ ಬಿಟ್ ಆಫ್ ಲ್ಯಾಂಡ್ ಸಹ ಮಂಜೂರು ಮಾಡಿ ಹಕ್ಕುಪತ್ರ ನೀಡಿದ್ದಾರೆ. ಅಕ್ರಮವಾಗಿ ಪಡೆದ ಮನೆಗೆ ನೆವಿಲ್ ಮಾರ್ಕಸ್ ಜೋಸೆಫ್ ರವರು ಈಗಾಗಲೇ ವಲಯ ಕಚೇರಿ ೪ರಲ್ಲಿ ಖಾತೆ ಮಾಡಿಸಿಕೊಂಡು ಮಮತ ಹಾಗೂ ಶ್ಯಾಂ ಎಂಬುವರಿಗೆ ಕೋಟ್ಯಾಂತರ ರೂ.ಗಳಿಗೆ ಮಾರಾಟ ಮಾಡಿದ್ದಾರೆ.
ಈ ಅಕ್ರಮದ ಬಗ್ಗೆ ಬಿ.ಎನ್.ನಾಗೇಂದ್ರ ರವರು ಲೋಕಾಯುಕ್ತ ಹಾಗೂ ಮುಡಾ ಆಯುಕ್ತರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ದಾಖಲೆಗಳನ್ನು ಪರಿಶೀಲಿಸಿದಾಗ ವ್ಯವಸ್ಥಾಪಕ ಸೋಮಸುಂದ್ರು ಹಾಗೂ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರು ನಿವೇಶನಕ್ಕೆ ಆಯುಕ್ತರ ಆದೇಶ ಮೀರಿ ತಮ್ಮ ಹಂತದಲ್ಲಿಯೇ ತಿದ್ದುಪಡಿ ಕ್ರಯಪತ್ರ ನೀಡಿ ಅಽಕಾರ ದುರುಪಯೋಗ ಮಾಡಿಕೊಂಡಿರುವುದು ಸಾಬೀತಾಗಿದೆ. ತಪ್ಪೆಸಗಿದ ಅಽಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಮುಡಾ ಕಾರ್ಯದರ್ಶಿ ಪ್ರಸನ್ನಕುಮಾರ್ ರವರು ಆಯುಕ್ತರಿಗೆ ನೀಡಿರುವ ವರದಿ ಆಧಾರದ ಮೇಲೆ ಸೋಮಸುಂದ್ರು ಅವರನ್ನು ಅಮಾನತ್ತುಗೊಳಿಸಲಾಗಿದೆ. ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮುಡಾ ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…