ಮೈಸೂರು: ದಲಿತ ಕುಟುಂಬದಿಂದ ಜಮೀನು ಪಡೆದ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ದಲಿತರಿಗೆ ಹಾಗೂ ಜಮೀನು ಮಾಲೀಕ ನಿಂಗ ಎಂಬುವವರ ಕುಟುಂಬಕ್ಕೆ ವಂಚನೆ ಮಾಡಿ, ಅವರಿಗೆ ಸೇರಬೇಕಾದ ಕೋಟ್ಯಾಂತರ ರೂ. ಬೆಲೆ ಬಾಳುವ ನಿವೇಶನವನ್ನು ತಮ್ಮ ಪತ್ನಿ ಪಾರ್ವತಿ ಹೆಸರಿಗೆ ಪಡೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ಅವರ ಕುಟುಂಬ ದಲಿತರಿಗೆ ವಂಚಿಸಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜಮೀನಿಗೆ ಸಂಬಂಧಿಸದ ಹಾಗೂ ಆ ಜಮೀನಿಗೆ ಯಾವುದೇ ಹಕ್ಕು ಬಾಧ್ಯತೆಗೆ ಒಳಪಡದವರಿಂದ ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಜಮೀನು ಬರೆಸಿಕೊಂಡಿದ್ದಾರೆ. ಅಲ್ಲದೇ ನಿಯಮ ಬಾಹಿರವಾಗಿ ದಲಿತರ ಜಮೀನನ್ನು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ದಾನಪತ್ರ ಸೃಷ್ಟಿಸಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಲಿತ ಕುಟುಂಬ ಹಾಗೂ ಮೂಲ ಜಮೀನಿನ ಮಾಲೀಕನಿಗೆ ಅನ್ಯಾಯವಾಗಿದೆ. ನಿಯಮ ಉಲ್ಲಂಘಿಸಿ ದಲಿತರಿಗೆ ಅನ್ಯಾಯ ಮಾಡಿರುವುದರಿಂದ ಸಿದ್ದರಾಮಯ್ಯ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಪತ್ನಿ ಪಾರ್ವತಿ ಹಾಗೂ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಸೂಕ್ತ ಕಾಲಂ ಪ್ರಕಾರ ಪ್ರಕರಣ ದಾಖಲಿಸಿ ತುರ್ತು ವಿಚಾರಣೆ ನಡೆಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…