ಮೈಸೂರು

ಸಿಎಂ ಪತ್ನಿಗೆ ೨ ಸಾವಿರ ಬೆಲೆಯ ಭೂಮಿ ಬದಲಾಗಿ ೧೦ ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿ ಕೊಟ್ಟ ಮುಡಾ

ಮೈಸೂರು : ೫೦ ;೫೦ ಅನುಪಾತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮುಡಾ ನಿವೇಶನ ಮಂಜೂರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಪತ್ನಿಗೆ ೨ ಸಾವಿರ ಬೆಲೆಯ ಭೂಮಿ ಬದಲಾಗಿ ೧೦ ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿಯನ್ನು ಮುಡಾದಿಂದ ಕೊಡಲಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕುತ್ತಿದೆ.

ನಗರದ ರಿಂಗ್ ರಸ್ತೆಯ ಹೊರವಲಯದ ದೇವನೂರು ಬಡಾವಣೆಯಲ್ಲಿ ವಶಪಡಿಸಿಕೊಂಡಿದ್ದ ಭೂಮಿ ಪ್ರಸ್ತುತ ಚರದ ಅಡಿಗೆ ೨ ರಿಂದ ೩ ಸಾವಿರ ಹಣ ನಿಗದಿ ಮಾಡಲಾಗಿದೆ. ಅದಕ್ಕೆ ಬದಲಾಗಿ ಸಿಎಂ ಪತ್ನಿ ಪಾರ್ವತಿಗೆ ವಿಜಯನಗರದ ಎರಡನೇ ಹಂತದಲ್ಲಿ ೧೪ ಸೈಟ್‌ ಮಂಜೂರು ಮಾಡಲಾಗಿದೆ. ಅಲ್ಲಿ ಚದರ ಅಡಿಗೆ ಕನಿಷ್ಟ ೧೦ ಸಾವಿರ ಬೆಲೆ ಇದೆ.

ಪ್ರಸ್ತುತ ವಿಜಯನಗರದ ೩ನೇ ಹಂತದ ಇ ಬ್ಲಾಕ್‌ ನಲ್ಲಿ ೪ , ಡಿ ಬ್ಲಾಕ್‌ ನಲ್ಲಿ ೨ ,ಜಿ ಬ್ಲಾಕ್‌ ಮತ್ತು ಸಿ ಬ್ಲಾಕ್‌ ನಲ್ಲಿ ತಲಾ ಒಂದು ಸೈಟ್‌ ಮಂಜೂರು ಮಾಡಿದ್ರೆ, ೪ನೇ ಹಂತದ ೨ನೇ ಫೇಸ್‌ ನಲ್ಲಿ ೬ ಸೈಟ್‌ ನೀಡಲಾಗಿದೆ. ಹೀಗಾಗಿ ಮುಡಾ ನೀಡಿರುವ ಬದಲಿ ನಿವೇಶನದ ಸುತ್ತ ಅನುಮಾನಗಳ ಹುತ್ತ ಬೆಳೆಯುತ್ತಿದೆ.

.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

28 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

1 hour ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

6 hours ago