Mysore
28
scattered clouds

Social Media

ಶನಿವಾರ, 11 ಜನವರಿ 2025
Light
Dark

ಶಾಸಕ ಜಿ.ಡಿ ದೇವೇಗೌಡಗೂ ಮುಡಾ ಸಂಕಷ್ಟ: ಸ್ನೇಹಮಯಿ ಕೃಷ್ಣ ದೂರು

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಪ್ರಾಧಿಕಾರದಿಂದ ಅಕ್ರಮವಾಗಿ ತಮ್ಮ ಪುತ್ರಿ ಹಾಗೂ ಅಳಿಯನಿಗೆ ನಿವೇಶನ ಕೋಡಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ದಾಖಲೆ ಸಮೇತ ದೂರು ನೀಡಿರುವ ಸ್ನೇಹಮಯಿ ಕೃಷ್ಣ, ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರದ ಆಸ್ತಿಗೆ ಸುಳ್ಳು ದಾಖಲೆಗಳನ್ನು ಸೃಷ್ಠಿ ಮಾಡಿಸಿದ್ದಾರೆ. ಪ್ರಾಧಿಕಾರದಿಂದ ಎರಡು ನಿವೇಶನಗಳನ್ನು ಅವರ ಮಗಳು ಮತ್ತು ಅಳಿಯಯ ಹೆಸರಿಗೆ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ಕೋರ್ಟ್‌ನಲ್ಲಿ ವ್ಯಾಜ್ಯ ಇದ್ದ ಭೂಮಿಯನ್ನು ಜಿ.ಟಿ. ದೇವೇಗೌಡರು ತಮ್‌ ಪ್ರಭಾವ ಬಳಸಿ ಚೌಡಯ್ಯ ಎಂಬುವವರಿಗೆ 44,736 ಚದರ ಅಡಿ ಜಾಗದ 6 ನಿವೇಶನ ಕೊಡಿಸಿದ್ದಾರೆ. ಅದರಲ್ಲಿ ಕಿಕ್‌ಬ್ಯಾಕ್‌ ರೂಪದಲ್ಲಿ 2 ನಿವೇಶನ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿದ್ದಾರೆ. ವಿಜಯನಗರ ಬಡಾವಣೆ 4ನೇ ಹಂತದಲ್ಲಿ 2 ನಿವೇಶನ ಪಡೆದು ಅದನ್ನು ತಮ್ಮ ಮಗಳು ಅನ್ನಪೂರ್ಣ ಹಾಗೂ ಅಳಿಯ ವಿಶ್ವೇಶ್ವರಯ್ಯ ಹೆಸರಿಗೆ ಮಾಡಿಸಿದ್ದಾರೆ.

ಈ ಭೂಮಿ ಮುಡಾ ವ್ಯಾಪ್ತಿಗೆ ಬರದಿದ್ದರೂ ದೇವನೂರು ಬಡಾವಣೆಗೆ ಪರಿಹಾರ ಕೊಟ್ಟಂತೆ ಜಿಟಿ ದೇವೇಗೌಡ ಅವರು ತಮ್ಮ ಪ್ರಭಾವ ಬೀರಿ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿರುವ ಅನುಮಾನವಿದೆ. ಆದ್ದರಿಂದ ಇದೆಲ್ಲದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಲೋಕಾ ಪೊಲೀಸರಿಗೆ ಮನವಿ ಮಾಡಿದ್ದಾರೆ.

Tags: