ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಪ್ರಾಧಿಕಾರದಿಂದ ಅಕ್ರಮವಾಗಿ ತಮ್ಮ ಪುತ್ರಿ ಹಾಗೂ ಅಳಿಯನಿಗೆ ನಿವೇಶನ ಕೋಡಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ದಾಖಲೆ ಸಮೇತ ದೂರು ನೀಡಿರುವ ಸ್ನೇಹಮಯಿ ಕೃಷ್ಣ, ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರದ ಆಸ್ತಿಗೆ ಸುಳ್ಳು ದಾಖಲೆಗಳನ್ನು ಸೃಷ್ಠಿ ಮಾಡಿಸಿದ್ದಾರೆ. ಪ್ರಾಧಿಕಾರದಿಂದ ಎರಡು ನಿವೇಶನಗಳನ್ನು ಅವರ ಮಗಳು ಮತ್ತು ಅಳಿಯಯ ಹೆಸರಿಗೆ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ.
ಕೋರ್ಟ್‌ನಲ್ಲಿ ವ್ಯಾಜ್ಯ ಇದ್ದ ಭೂಮಿಯನ್ನು ಜಿ.ಟಿ. ದೇವೇಗೌಡರು ತಮ್ ಪ್ರಭಾವ ಬಳಸಿ ಚೌಡಯ್ಯ ಎಂಬುವವರಿಗೆ 44,736 ಚದರ ಅಡಿ ಜಾಗದ 6 ನಿವೇಶನ ಕೊಡಿಸಿದ್ದಾರೆ. ಅದರಲ್ಲಿ ಕಿಕ್‌ಬ್ಯಾಕ್ ರೂಪದಲ್ಲಿ 2 ನಿವೇಶನ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿದ್ದಾರೆ. ವಿಜಯನಗರ ಬಡಾವಣೆ 4ನೇ ಹಂತದಲ್ಲಿ 2 ನಿವೇಶನ ಪಡೆದು ಅದನ್ನು ತಮ್ಮ ಮಗಳು ಅನ್ನಪೂರ್ಣ ಹಾಗೂ ಅಳಿಯ ವಿಶ್ವೇಶ್ವರಯ್ಯ ಹೆಸರಿಗೆ ಮಾಡಿಸಿದ್ದಾರೆ.
ಈ ಭೂಮಿ ಮುಡಾ ವ್ಯಾಪ್ತಿಗೆ ಬರದಿದ್ದರೂ ದೇವನೂರು ಬಡಾವಣೆಗೆ ಪರಿಹಾರ ಕೊಟ್ಟಂತೆ ಜಿಟಿ ದೇವೇಗೌಡ ಅವರು ತಮ್ಮ ಪ್ರಭಾವ ಬೀರಿ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿರುವ ಅನುಮಾನವಿದೆ. ಆದ್ದರಿಂದ ಇದೆಲ್ಲದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಲೋಕಾ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…