ಮೈಸೂರು

ಮುಡಾದ 50:50 ಪ್ರಕರಣ ವಿಚಾರ: ಸತ್ಯ ಮರೆ ಮಾಚಲು ಸಾಧ್ಯವಿಲ್ಲ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾದ 50:50 ಅನುಪಾತದ ಬದಲಿ ನಿವೇಶನ ಪ್ರಕರಣದಲ್ಲಿ ಯಾರಿಂದಲೂ ಸತ್ಯ ಮರೆ ಮಾಚಲು ಸಾಧ್ಯವಿಲ್ಲ ಎಂದು ದೂರುದಾರರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾದಿಂದ 50:50 ಅನುಪಾತದ ಬದಲಿ ನಿವೇಶನದಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಅಕ್ರಮವಾಗಿ ನಿವೇಶನಗಳನ್ನು ನೀಡಲಾಗಿದೆ. ಇದರಿಂದ ಮುಡಾಗೆ ಆರ್ಥಿಕ ನಷ್ಟವಾಗಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಆದರೆ ಒಂದು ಕಡೆ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಮುಡಾ ಕಚೇರಿಯೇ ನಿವೇಶನ ನೀಡಿದ್ದಾರೆ ಹೇಳದ್ದಾರೆ. ಮತ್ತೊಂದು ಕಡೆ ಈ ಪ್ರಕರಣದಲ್ಲಿ ಆರೋಪಿಗಳ ಪಾತ್ರವಿಲ್ಲವೆಂದು ಹೇಳಿದ್ದಾರೆ. ಹೀಗಾಗಿ ಸೋಮವಾರ(ಮಾರ್ಚ್.18) ನಾನೇ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದೇನೆ ಎಂದು ಹೇಳಿದರು.

ಈ ಪ್ರಕರಣದ ಬಗ್ಗೆ ವಾದ ಮಂಡನೆ ಮಾಡುವ ವೇಳೆ ನಿಖಾಧಿಕಾರಿ ಹೇಳಿದ್ದು, ವರದಿ ನೀಡಿದ್ದು ನಿಜವಲ್ಲ. ಅವರು ಸಿಎಂ ಪ್ರಭಾವಕ್ಕೆ ಸಿದ್ದರಾಮಯ್ಯ ಒಳಗಾಗಿ ವರದಿ ನೀಡಿದ್ದಾರೆಂದು ಹೇಳಿದ್ದೇನೆ. ಆದ್ದರಿಂದಲೇ ಕೋರ್ಟ್‌, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸ್ಪಷ್ಟೀಕರಣ ನೀಡುವಂತೆ ಆದೇಶ ಹೊರಡಿಸಿದೆ. ಅಲ್ಲದೇ ಈ ವಿಚಾರಣೆಯನ್ನು ಮಾರ್ಚ್.24ಕ್ಕೆ ಮುಂದೂಡಲಾಗಿದೆ. ಆ ದಿನ ಲೋಕಾಯುಕ್ತ ಅಧಿಕಾರಿಗಳು ಏನೂ ಸ್ಪಷ್ಟೀಕರಣ ನಿಡುತ್ತಾರೋ ನೀಡಲಿ. ಆದರೆ ಅಕ್ರಮ ಆಗಿರುವುದು ನಿಜವೆಂದು ನಾನು ಸಾಬೀತು ಮಾಡೇ ಮಾಡುತ್ತೇನೆ ಎಂದರು

ಅರ್ಚನ ಎಸ್‌ ಎಸ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

9 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

9 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

9 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

9 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

9 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago