ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಜ.22 ರಿಂದ 31 ರವರೆಗೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಬಿಡುಗಡೆಗೊಳಿಸಿದರು.
ಇತಿಹಾಸ ಪ್ರಸಿದ್ಧ ಮುಡುಕುತೊರೆ ದೇವಸ್ಥಾನಕ್ಕೆ ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾಗಿದ್ದು, ವಿಜೃಂಭಣೆಯಿಂದ ಜರುಗುವ ಜಾತ್ರೆಗೆ ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಜಾತ್ರೆಯು ಜನವರಿ 21 ರಿಂದ(ಇಂದಿನಿಂದ) ಪ್ರಾರಂಭವಾಗಿದ್ದು, 28 ರಂದು ಭ್ರಹ್ಮರಥೋತ್ಸವ, 31 ರಂದು ತೆಪ್ಪೋತ್ಸವ ಹಾಗೂ ಫೆಬ್ರವರಿ 4 ರಂದು ಗಿರಿಪ್ರದಕ್ಷಿಣೆ ನಡೆಯಲಿದೆ. ಫೆ.6 ರಂದು ನಡೆಯುವ ಮಹಾಭಿಷೇಕದೊಂದಿಗೆ ಜಾತ್ರೆಯು ಸಂಪನ್ನಗೊಳ್ಳಲಿದೆ.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್, ರವಿಕುಮಾರ್, ಆಪ್ತಸಹಾಯಕರಾದ ಶ್ರೀನಿವಾಸ್, ತಲಕಾಡು ವೈಧ್ಯನಾಥೇಶ್ವರ ಸಮೂಹ ದೇವಾಲಯ ಸಮಿತಿ ಅಧ್ಯಕ್ಷರಾದ ನಾಗರಾಜು, ಲೋಕೇಶ್, ಮಾದೇಶ್, ಶಾಂತರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…