ಮೈಸೂರು

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಜ.22 ರಿಂದ 31 ರವರೆಗೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಬಿಡುಗಡೆಗೊಳಿಸಿದರು.

ಇತಿಹಾಸ ಪ್ರಸಿದ್ಧ ಮುಡುಕುತೊರೆ ದೇವಸ್ಥಾನಕ್ಕೆ ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾಗಿದ್ದು, ವಿಜೃಂಭಣೆಯಿಂದ ಜರುಗುವ ಜಾತ್ರೆಗೆ ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಜಾತ್ರೆಯು ಜನವರಿ 21 ರಿಂದ(ಇಂದಿನಿಂದ) ಪ್ರಾರಂಭವಾಗಿದ್ದು, 28 ರಂದು ಭ್ರಹ್ಮರಥೋತ್ಸವ, 31 ರಂದು ತೆಪ್ಪೋತ್ಸವ ಹಾಗೂ ಫೆಬ್ರವರಿ 4 ರಂದು ಗಿರಿಪ್ರದಕ್ಷಿಣೆ ನಡೆಯಲಿದೆ. ಫೆ.6 ರಂದು ನಡೆಯುವ ಮಹಾಭಿಷೇಕದೊಂದಿಗೆ ಜಾತ್ರೆಯು ಸಂಪನ್ನಗೊಳ್ಳಲಿದೆ.

ಈ ಸಂದರ್ಭದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್, ರವಿಕುಮಾರ್, ಆಪ್ತಸಹಾಯಕರಾದ ಶ್ರೀನಿವಾಸ್, ತಲಕಾಡು ವೈಧ್ಯನಾಥೇಶ್ವರ ಸಮೂಹ ದೇವಾಲಯ ಸಮಿತಿ ಅಧ್ಯಕ್ಷರಾದ ನಾಗರಾಜು, ಲೋಕೇಶ್, ಮಾದೇಶ್, ಶಾಂತರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇತಿಹಾಸದ ಪುಟ ಸೇರಿದ ಹಳೆಯ ರಂಗಮಂದಿರ

ಪುನೀತ್ ಮಡಿಕೇರಿ ೨.೧೦ ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ನೂತನ ರಂಗಮಂದಿರ ನಿರ್ಮಾಣಕ್ಕೆ ಸಿದ್ಧತೆ ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿದ್ದ…

5 mins ago

ಗಾಳಿ, ನೀರಿನಲ್ಲಿ ಬಸ್‌ ಓಡಿಸೋಕೆ ಆಗಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು:  “ಗಾಳಿ, ನೀರಿನಲ್ಲಿ ಬಸ್‌ ಓಡಿಸೋಕೆ ಆಗಲ್ಲ!” ಎಂದು ಹೇಳುವ ಮೂಲಕ ಬಸ್‌ ಟಿಕೆಟ್‌ ದರ ಏರಿಕೆಯನ್ನು ಸಚಿವ ಪ್ರಿಯಾಂಕ್‌…

16 hours ago

ನವೆಂಬರ್‌ನಲ್ಲೇ 99 ಅಡಿಗೆ ಇಳಿದ ಕೆಆರ್‌ಎಸ್‌ — ಬೇಸಿಗೆಗೂ ಮುನ್ನ ನೀರಿನ ಕೊರತೆಯ ಆತಂಕ!

ಮಂಡ್ಯ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ನವೆಂಬರ್‌ನಲ್ಲೇ 99 ಅಡಿಗೆ ಇಳಿದಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ…

18 hours ago

ರಾಜ್ಯದ ರೈತರಿಗೆ ಸಿಹಿಸುದ್ದಿ: 2500ರೂ ಇದ್ದ ಬರ ಪರಿಹಾರದ ಮೊತ್ತ 5000ರೂಗೆ ಏರಿಕೆ

ಬೆಂಗಳೂರು: ರೈತರಿಗೆ ದೀಪಾವಳಿ ಹೊತ್ತಿನಲ್ಲಿ ಪರಿಹಾರದ ಸಿಹಿ ಸುದ್ದಿ. ಈ ಹಿಂದೆ ₹2,500 ಇದ್ದ ಬರ ಪರಿಹಾರವನ್ನು ಒಟ್ಟು ₹5,000ಕ್ಕೆ…

19 hours ago

ಜೈಲಿನ ರಾಜಾತಿಥ್ಯ ವಿಡಿಯೋ ಪ್ರಕರಣದಲ್ಲಿ ಧನ್ವೀರ್‌ಗೆ ಸಂಕಷ್ಟ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾದ ವಿಡಿಯೋ ವೈರಲ್‌ ಪ್ರಕರಣದಲ್ಲಿ ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ…

20 hours ago