ಮೈಸೂರು: ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವವು ಜನವರಿ.31ರಿಂದ ಫೆಬ್ರವರಿ.16ರವರೆಗೆ ನಡೆಯಲಿದೆ.
ಜನವರಿ.31ರಿಂದ ಫೆಬ್ರವರಿ.16ರವರೆಗೆ ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಫೆಬ್ರವರಿ.2ರಂದು ರಥೋತ್ಸವ, ಫೆಬ್ರವರಿ.10ಕ್ಕೆ ತೆಪ್ಪೋತ್ಸವ ನಡೆಯಲಿದೆ. 17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮುಡುಕುತೊರೆ ಜಾತ್ರೆಗೆ ಇತಿಹಾಸವಿದ್ದು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ.
ಇನ್ನು ಜಾತ್ರೆಗೆ ಸಹಸ್ರಾರು ಮಂದಿ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತರಕ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.





