ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
20 ವರ್ಷದ ಗೌರವ್ ಎಂಬಾತನೇ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ. ಸಣ್ಣ ವಿಚಾರಕ್ಕೆ ಜಗಳ ನಡೆದಿದ್ದು, ಅಭಿ, ಅರ್ಜುನ್ ಗ್ಯಾಂಗ್ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಯುವಕ ಗೌರವ್ ಸಾವನ್ನಪ್ಪಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೇಟಗಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.




