ಮೈಸೂರು: ಇಲ್ಲಿನ ಸಿದ್ದಲಿಂಗಪುರ ಗ್ರಾಮದ ಹೆದ್ದಾರಿ ಬಳಿಯಿರುವ ಪಾಳು ಬಿದ್ದ ಜಾಗದಲ್ಲಿ ಮಲಗುತ್ತಿದ್ದ ಅಪರಿಚಿತ ವ್ಯಕ್ತಿಯ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.
ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರ ಗ್ರಾಮದ ಹೆದ್ದಾರಿ ಬಳಿಯಿರುವ ಪಾಳು ಬಿದ್ದ ಸ್ಥಳದಲ್ಲಿ ಪ್ರತಿನಿತ್ಯವೂ ಮಲಗುತ್ತಿದ್ದ ಅಪರಿಚಿತ ವ್ಯಕ್ತಿಯ ಕೊಲೆ ನಡೆದಿದೆ ಎಂಬ ಘಟನೆ ಇಂದು(ಫೆಬ್ರವರಿ.5) ಬೆಳಕಿಗೆ ಬಂದಿದೆ.
ಈ ಘಟನೆಯ ಬಗ್ಗೆ ತಿಳಿದ ಕೂಡಲೇ ಮೈಸೂರಿನ ಮೇಟಗಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.