ಮೈಸೂರು: ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು 100ದಿನದ ಅಭಿಯಾನವು ಶನಿವಾರದಿಂದ ಪ್ರಾಂರಭವಾಗಿದ್ದು, ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಗಾಯತ್ರಿ ಹೇಳಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ‘ಆರೋಗ್ಯದ ಬಗ್ಗೆ ಇರಲಿ ಗಮನ ಟಿ ಬಿ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷಯ ರೋಗಿಗಳನ್ನು ಪತ್ತೆ ಹಚ್ಚುವ ಕೆಲಸ ಚುರುಕಾಗಬೇಕು. ಇದು ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಆಗಿರುವುದರಿಂದ ಇದಕ್ಕೆ ಚಿಕಿತ್ಸೆ ನೀಡಿ ಹರಡದಂತೆ ನೋಡಿಕೊಳ್ಳಬೇಕು. ಮೂರು ನಾಲ್ಕು ವಾರಗಳಿಗೂ ಹೆಚ್ಚು ಕೆಮ್ಮು ಇದ್ದರೆ ಅದು ಕ್ಷಯ ಆಗಿರಬಹುದು ಆದ್ದರಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು
ಕ್ಷಯ ರೋಗಕ್ಕೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುವುದು. ಗ್ರಾಮಿಣ ಪದೇಶದಲ್ಲಿ ಹೆಚ್ಚಿನ ಪರೀಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಹೆಚ್ಚಿನ ರೀತಿ ಕಾರ್ಯ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ನಿಕ್ಷಯ ಪೋರ್ಟಲ್ ನಲ್ಲಿ ಕ್ಷಯ ರೋಗಿಗಳನ್ನು ಅಡಾಪ್ಟ್ ಮಾಡಿಕೊಳ್ಳಲು ಅವಕಾಶ ಇದೆ. ಈ ರೋಗಿಗಳ ಔಷಧಿಗಳನ್ನು ನೀಡಲು ಕಡಿಮೆ ಮೊತ್ತದ ಹಣವನ್ನು ಒದಗಿಸಬಹುದು ಯಾರು ಬೇಕಾದರೂ ಅಡಾಪ್ಟ್ ಮಾಡಿಕೊಳ್ಳಬಹುದು ಎಂದರು.
ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ ಮಾತನಾಡಿ, ಕ್ಷಯ ರೋಗ ಅಂಟು ರೋಗ. ಇಂತಹ ರೋಗಕ್ಕೆ ಚಿಕಿತ್ಸೆ ನೀಡುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಶ್ರಮವಹಿಸುತ್ತಿದ್ದಾರೆ. ಸಾರ್ವಜನಿಕರು ಹೆಚ್ಚಿನ ಚಿಕಿತ್ಸೆಗೆ ಒಳಗಾಗಬೇಕು ಎಂದರು. ವೈದ್ಯರು ಹಾಗೂ ಸೈನಿಕರು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ತಮ್ಮ ವೃತ್ತಿಯನ್ನು ಮಾಡುತ್ತಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪಿ ಸಿ ಕುಮಾರಸ್ವಾಮಿ ಮಾತನಾಡಿ, ಇಂದಿನಿಂದ 100 ದಿನಗಳ ಕಾಲ ಟಿ ಬಿ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ. 2005-06 ರಿಂದ ಆರ್ ಎಂ ಪಿ ಟಿ ಸಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಟಿ ಬಿ ಯನ್ನು ಕಡಿಮೆ ಮಾಡುವುದು ಆಗಿದೆ. 1 ಲಕ್ಷ ಜನರಿಗೆ 50 ಕ್ಕಿಂತ ಕಡಿಮೆ ಜನರಿಗೆ ಟಿ ಬಿ ಇರುವಂತೆ ಮಾಡುವುದು ನಮ್ಮ ಗುರಿ ಆಗಿದೆ. ಮುಂದಿನ 100 ದಿನಗಳ ಕಾಲ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಟಿ ಬಿ ಯನ್ನು ಕಡಿಮೆ ಮಾಡಲು ಗ್ರಾಮಗಳಿಗೆ ಭೇಟಿ ನೀಡಿ ಸರ್ವೇ ಮಾಡಲಾಗುವುದು. ಯಾವ ಗ್ರಾಮಗಳಲ್ಲಿ ಯಾವ ಏರಿಯಾಗಳಲ್ಲಿ ಕ್ಷಯ ರೋಗ ಇದೆ ಎಂಬುದನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಸಕ್ಕರೆ ಕಾಯಿಲೆ ಹಾಗೂ ಏಡ್ಸ್, ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರಿಗೆ ಹೆಚ್ಚಾಗಿ ಕ್ಷಯ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಇಂತವರ ಹೆಚ್ಚಿನ ನಿಗಾ ವಹಿಸಲಾಗುವುದು ಸೂಕ್ತ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಜಯಂತ್ ಎಂ ಎಸ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಬೃಂದಾ, ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಯಾವುದಾದರೂ ಕವನ ವಾಚಿಸಿ, ಏನಾದರೂ ಆಹಾರ ತಿನ್ನಿ ಎಂದವಳು ಹೇಳಿದಳು ಕವಿರಾಯರಿಗೆ ಕಿವಿಮಾತು! ಸಮ್ಮೇಳನದಿಂದ ಬರುವಾಗ ಆ..ಹಾರ, ಶಾಲು, ಸ್ಮರಣಿಕೆಗಳ…
ಡಿ.೧೨ರಂದು ಹೈಕೋರ್ಟ್ ನ್ಯಾಯಮೂರ್ತಿಗಳಾದ, ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ…
ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್‌ನನ್ನು ಪೊಲೀಸ್ ವಶಕ್ಕೆ ಪಡೆಯುವಂತೆ ಮುಂಬೈ ನ್ಯಾಯಾಲಯ ಆದೇಶ ನೀಡಿತ್ತು. ಆದರೆ…
ನಾ.ದಿವಾಕರ ತಂತ್ರಜ್ಞಾನದ ಆವಿಷ್ಕಾರಗಳಿಗೆ ಸಮಾನಾಂತರವಾಗಿ ಬೆಳೆಯುತ್ತಿರುವ ಡಿಜಿಟಲ್ ವಂಚಕ ಜಾಲಗಳು ಕೋವಿಡ್ ೧೯ ವಿಶ್ವದಾದ್ಯಂತ ಜನರ ಬದುಕನ್ನು ಮೂರಾಬಟ್ಟೆ ಮಾಡಿದ…
ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವರು ಸಂವಿಧಾನ ಕುರಿತ ಚರ್ಚೆಯನ್ನು ಪ್ರಧಾನಿಯೇ ರಾಜಕೀಯಗೊಳಿಸುವ ಪ್ರಯತ್ನ ಮಾಡಿದ್ದು ಸರಿಯಲ್ಲ ದೇಶದ ಸಂವಿಧಾನ ೭೫…
ಎಂ.ಬಿ.ರಂಗಸ್ವಾಮಿ ಮೂಗೂರು: ೩ ವರ್ಷಗಳಿಂದ ಸ್ಥಗಿತಗೊಂಡಿರುವ ತೆಪ್ಪೋತ್ಸವ ಮೂಗೂರು: ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯದಲ್ಲಿ ಕೋಟ್ಯಂತರ ರೂ.…