ಮೈಸೂರು

ಮೈಸೂರು: 111 ಅಡಿ ಬೃಹತ್‌ ಗಂಧದಕಡ್ಡಿ ಬೆಳಗಿಸಿ ದಾಖಲೆ

ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್‌ ಪ್ಯೂರ್‌ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು ಹಚ್ಚುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಅರಮನೆ ಅಂಗಳದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಶ್ರೀರಾಮನ ಮೂರ್ತಿಯನ್ನ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ತಾಯಿ ಸರಸ್ವತಿ, ಪತ್ನಿ ವಿಜೇತ ಸಂಸದ ಪ್ರತಾಪ್‌ ಸಿಂಹ ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಸೈಕಲ್‌ ಅಗರಬತ್ತಿ ಸಂಸ್ಥೆಯ ಮುಖ್ಯಸ್ಥ ಆರ್.ಗುರು ಅವರುಗಳು ಬೃಹತ್‌ ಗಂಧದಕಡ್ಡಿಯನ್ನ ಬೆಳಗಿಸಿದರು.

ಇನ್ನು 111 ಉದ್ದದ ಗಂಧದಕಡ್ಡಿ ಬೆಳಗಿಸುವ ಈ ಕಾರ್ಯಕ್ರಮಕ್ಕೆ ನೂರಾರು ಸಂಖ್ಯೆಯಲ್ಲಿ ರಾಮ ಭಕ್ತರು ಆಗಮಿಸಿ ದಾಖಲೆಯ ಸನ್ನಿವೇಶಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ರಾಮ ಲಕ್ಷ್ಮಣ ಸೀತಾಮಾತೆಯ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದಲ್ಲದೇ ಅಯೋಧ್ಯೆಯ ರಾಮಮಂದಿರದ ಮಾದರಿಯನ್ನು ಪ್ರದರ್ಶನಕ್ಕಿಡಲಾಗಿತ್ತು. ಇದೇ ವೇಳೆ ಪುಟ್ಟ ಮಗುವೊಂದು ಬಾಲ ರಾಮನ ವೇಷ ಧರಿಸಿ ನೆರೆದಿದ್ದವರ ಗಮನ ಸೆಳೆಯಿತು. ಇದರೊಂದಿಗೆ ರಾಮಭಕ್ತರು ನಾ ಮುಂದು ತಾ ಮುಂದು ಎಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಾಗೂ ಫೋಟೊ ತೆಗೆಸಿಕೊಳ್ಳಲು ಮುಗಿ ಬೀಳುತ್ತಿದ್ದ ದೃಶ್ಯಗಳು ಕಂಡಿಬಂದವು.

ಶ್ರೀರಾಮನಿಗೆ 108 ರೀತಿಯ ಸಿಹಿ ತಿನಿಸುಗಳ ಅರ್ಪಣೆ

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮೈಸೂರಿನ ಇರ್ವಿನ್‌ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಈ ವೇಳೆ ದೇವಸ್ಥಾನದ ಆವರಣದಲ್ಲಿ ವಿಷ್ಣುಸಮಾಜದ ನೂರಾರು ರಾಮ ಭಕ್ತರು ಸೇರಿ ರಾಮನ ಭಜನೆ ಮಾಡಿದರು. ಭಕ್ತರಿಗೆ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಇನ್ನು ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ವಿಷ್ಣು ಸಮಾಜದ ವತಿಯಿಂದ 108 ತರಹದ ಸಿಹಿ ತಿಂಡಿ ತಿನಿಸುಗಳನ್ನು ತಯಾರಿಸಿ ಶ್ರೀ ರಾಮನಿಗೆ ಅರ್ಪಿಸಿದರು.

ಈ ವಿಶೇಷ ದಿನದ ಅಂಗವಾಗಿ ವಿಷ್ಣು ಸಮಾಜದ ರಾಮಭಕ್ತರು ತಮ್ಮ ಅಂಗಡಿ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿದ್ರು.
ಇನ್ನು ದೀರ್ಘ ಕಾಲದ ಕನಸು ನನಸಾದ ದಿನದ ಸಂತಸದಲ್ಲಿ ಯುವಕರು ಜೈ ಶ್ರೀರಾಮ್‌ ಘೋಷಣೆಗಳನ್ನ ಕೂಗಿ ಕುಣಿದು ಕುಪ್ಪಳಿಸಿದರು.

andolanait

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

3 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

3 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

3 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

3 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

3 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

17 hours ago