ಮೈಸೂರು: ಬಿಜೆಪಿಯ 18 ಶಾಸಕರು ಅಮಾನತು ಹಾಗೂ ಹನಿಟ್ರ್ಯಾಪ್ ವಿಚಾರವನ್ನು ಖಂಡಿಸಿ ಮೈಸೂರು ಜಿಲ್ಲಾ ಮತ್ತು ನಗರ ಬಿಜೆಪಿ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ನಗರದ ರಾಮಸ್ವಾಮಿ ವೃತ್ತದ ಬಳಿ ಮೈಸೂರು ಜಿಲ್ಲಾ ನಗರ ಬಿಜೆಪಿ ಮುಖಂಡರು ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಮತ್ತು ಹನಿಟ್ರ್ಯಾಪ್ ವಿಚಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಕಾಂಗ್ರೆಸ್ ಸರ್ಕಾರ, ಗುತ್ತಿಗೆಯಲ್ಲಿ ಶೇ.4% ರಷ್ಟು ಮೀಸಲಾತಿಯನ್ನು ವಿರೋಧಿಸಿ ಹಲಾಲ್ ಸರ್ಕಾರ ಎಂದು ಭಿತ್ತಿ ಪತ್ರ ಹಿಡಿದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸವ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.





