ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ.
ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದ ಕೆರೆ ಪಾಪಣ್ಣ ಎಂಬುವವರ ಮನೆ ಸಮೀಪವೇ ಚಿರತೆಯೊಂದು ಬೀದಿ ನಾಯಿಯನ್ನು ಹೊತ್ತೊಯ್ದಿದೆ.
ಇದನ್ನು ಓದಿ: ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ
ಚಿರತೆ ದಾಳಿ ಮಾಡುವಾಗ ನಾಲ್ಕೈದು ನಾಯಿಗಳು ಕೂಗಾಟ ನಡೆಸಿದ್ದು, ಒಂದು ನಾಯಿಯನ್ನು ಎಳೆದೊಯ್ದು ತಿಂದು ಹಾಕಿದೆ.
ಈ ದೃಶ್ಯ ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ದಾಳಿಯಿಂದ ಭಯಭೀತರಾಗಿರುವ ಗ್ರಾಮಸ್ಥರು ಹೆಚ್ಚಿನ ಅನಾಹುತ ಆಗುವ ಮುನ್ನವೇ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ವಹಿಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.





