Mysore
23
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

Mysore accident

ಮೈಸೂರು: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ಬರುತ್ತಿದ್ದ ಹೀರೋ ಹೋಂಡಾ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮಡಿಕೇರಿ ತಾಲ್ಲೂಕಿನ ಕಡಗನಹಳ್ಳಿ ಗ್ರಾಮದ ನಿವಾಸಿ ಶ್ಯಾಮಿಯೋಲ್‌ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ನವೀನ್‌ ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಗಾಯಾಳು ನವೀನ್‌ನನ್ನು ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ಬೈಲುಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!