ಮೈಸೂರು : ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದರೂ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮನೆಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಮನೆ ಸುಟ್ಟು ಕರಗಲಾಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಅನಾಹುತ ತಪ್ಪಿದೆ.
ಗ್ರಾಮದ ಆನಂದೂರು ಶನಿವಾರೆಗೌಡ, ವೆಂಕಟೇಶ್‌ಗೌಡ ಮತ್ತು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಯಲ್ಲಿ ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.
ಮಾಹಿತಿ ಅರಿತ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.





