ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ವಿಮಾನ ನಿಲ್ದಾಣ ವಿಸ್ತರಣಾ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು ನಾಗರೀಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗುರುವಾರ ದೆಹಲಿ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ವಿಮಾನ ನಿಲ್ದಾಣ ವಿಸ್ತರಣೆ ಕುರಿತು ಮುಂದಿನ ಕ್ರಮ ಕೈಗೊಳ್ಳಲು ಮತ್ತು ಭೂ ಹಸ್ತಾಂತರ ಪ್ರಕ್ರಿಯೆಯನ್ನು ಶೀಘ್ರವಾಗಿ ಪ್ರಾರಂಭಿಸುವ ಕುರಿತು ಸಚಿವರಲ್ಲಿ ಮನವರಿಕೆ ಮಾಡಿದರು. ಜತೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಅಡ್ಡಿಯಾಗಿರುವ ವಿವಿಧ ಸಮಸ್ಯೆಗಳನ್ನು ಮತ್ತು ಅದನ್ನು ಪರಿಹರಿಸಲು ಅವರ ಸೂಕ್ತ ನಿರ್ದೇಶನವನ್ನು ಕೇಳಿದರು.
ಇದೆ ವೇಳೆ ಮೈಸೂರಿಗೆ ಹೆಚ್ಚಿನ ವಿಮಾನಗಳ ಸಂಪರ್ಕ ಕಲ್ಪಿಸಲು ಸಹಕರಿಸಬೇಕೆಂಬ ವಿನಂತಿಯನ್ನು ಅವರ ಮುಂದಿಟ್ಟರು. ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ ಅವರು ಆದಷ್ಟು ಬೇಗ ಮೈಸೂರಿನಿಂದ ಹೊಸ ವಿಮಾನ ಸೇವೆಗಳನ್ನು ಪ್ರಾರಂಭಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ನಮಗೆ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೇರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…