ಮೈಸೂರು: ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 02 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್‌ಸೈಟ್ ಮೂಲಕ ಅಕ್ಟೋಬರ್ 19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಜಯನಗರದ ಕೃಷ್ಣದೇವರಾಯ ವೃತ್ತದಲ್ಲಿನ ಮೈಸೂರು ಗ್ರಾಮಾಂತರ ಕಚೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.ಸಂ: 0821-2567940 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ಗ್ರಾಮಾಂತರ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂಜನಗೂಡು ವ್ಯಾಪ್ತಿಯಲ್ಲೂ ಅರ್ಜಿ ಆಹ್ವಾನ
ನಂಜನಗೂಡು ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಗೌರವಧನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು https://karnemakaone.nic.in/abcd/ ವೆಬ್‌ಸೈಟ್ ಮೂಲಕ ಅಕ್ಟೋಬರ್ 19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಂಜನಗೂಡು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಕಚೇರಿ ಅಥವಾ ದೂ.ಸಂ.08221-226168 ಅನ್ನು ಸಂಪರ್ಕಿಸಬಹುದು ಎಂದು ನಂಜನಗೂಡು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.