ಮೈಸೂರು

ಮೈಸೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ, ಏಲ್ಲೇಲ್ಲಿ, ಎಷ್ಟು ಹುದ್ದೆ ಖಾಲಿ?

ಮೈಸೂರು: ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 02 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್‌ಸೈಟ್ ಮೂಲಕ ಅಕ್ಟೋಬರ್ 19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಜಯನಗರದ ಕೃಷ್ಣದೇವರಾಯ ವೃತ್ತದಲ್ಲಿನ ಮೈಸೂರು ಗ್ರಾಮಾಂತರ ಕಚೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.ಸಂ: 0821-2567940 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ಗ್ರಾಮಾಂತರ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂಜನಗೂಡು ವ್ಯಾಪ್ತಿಯಲ್ಲೂ ಅರ್ಜಿ ಆಹ್ವಾನ

ನಂಜನಗೂಡು ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಗೌರವಧನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು https://karnemakaone.nic.in/abcd/ ವೆಬ್‌ಸೈಟ್ ಮೂಲಕ ಅಕ್ಟೋಬರ್ 19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಂಜನಗೂಡು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಕಚೇರಿ ಅಥವಾ ದೂ.ಸಂ.08221-226168 ಅನ್ನು ಸಂಪರ್ಕಿಸಬಹುದು ಎಂದು ನಂಜನಗೂಡು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago