ಮೈಸೂರು: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಹಾಗೂ ಡಾ. ಗಂಗೂಬಾಯಿ ಹಾನಗಲ್ ಹುಬ್ಬಳ್ಳಿ ಕೇಂದ್ರದಲ್ಲಿ ಎಂ.ಪಿ.ಎ ಬ್ಯಾಚುಲರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್, ಸ್ನಾತಕೋತ್ತರ ಪದವಿ ಮಾಸ್ಟರ್ ಆಫ್ ಆರ್ಟ್ಸ್ (MPA) ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯು.ಜಿ.ಸಿ ನಿಯಮಾವಳಿಗಳ ಅನ್ವಯ ಅರ್ಹತೆ ಹೊಂದಿರುವವರು ನೃತ್ಯ, ಭರತನಾಟ್ಯ ಕಥಕ್, ಹಿಂದೂಸ್ಥಾನಿ, ಮತ್ತು ಕರ್ನಾಟಕ ಸಂಗೀತ, ನಾಟಕ, ವೀಣೆ. ಮೃದಂಗ, ತಬಲ, ಕನ್ನಡ, ಸಂಸ್ಕೃತ ಮತ್ತು ವಿಷಯಗಳಿಗೆ ಸಂಬoಧಿಸಿದoತೆ ನೆಟ್/ಕೆ-ಸೆಟ್ ಉತ್ತೀರ್ಣರಾಗಿರಬೇಕು.
ವಿಶ್ವವಿದ್ಯಾಲಯದ ಅಧೀಕೃತ ವೆಬ್‌ಸೈಟ್ https://musicuniversity.ac.in ನಲ್ಲಿ ಅರ್ಜಿ ಡೌನ್ಲೊಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 15 ರೊಳಗೆ ಕಚೇರಿಗೆ ಸಲ್ಲಿಸಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಾಮಾನ್ಯ ವರ್ಗ-ರೂ.500 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 (ಪ್ರಮಾಣ ಪತ್ರದೊಂದಿಗೆ,) ಅಭ್ಯರ್ಥಿಗಳು ರೂ.250 ಗಳನ್ನು ವಿಶ್ವವಿದ್ಯಾಲಯವು ಮೈಸೂರಿನ ಕೃಷ್ಣಮೂರ್ತಿ ಪುರಂ ಶಾಖೆಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ ಹಣಕಾಸು ಅಧಿಕಾರಿ ಇವರ ಪದನಾಮವನ್ನು ಹೊಂದಿರುವ ಉಳಿತಾಯ ಖಾತೆ ಸಂಖ್ಯೆ:64097891316 (IFSC CODE:SBIN0040056) ಚಲನ್ ಅಥವಾ ಯಾವುದೆ ರಾಷ್ಟ್ರೀಕೃತ ಬ್ಯಾಂಕುಗಳಿoದ ಮೈಸೂರಿನ ಕೆ.ಎಸ್.ಜಿ.ಹೆಚ್ ಸಂಗೀತ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳ ಹೆಸರಿನಲ್ಲಿ ಮೇಲಿನ ಬ್ಯಾಂಕಿಗೆ ಸಂದಾಯವಾಗುವoತೆ ಡಿ.ಡಿ ಯನ್ನು ಪಡೆದು ಲಗತ್ತಿಸಬೇಕು.
ಅರ್ಹತೆ, ಅನುಭವದ ವಿವರಗಳು ಮತ್ತು ದೃಢೀಕೃತ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರಿಗೆ ಅರ್ಜಿಗಳನ್ನು ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ದೂ.ಸಂ: 0821-2332703 ಅನ್ನು ಸಂಪರ್ಕಿಸಬಹುದು ಎಂದು ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…