Mysore
27
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

ಮೈಸೂರು ವಸ್ತು ಪ್ರದರ್ಶನ: ವಾರ್ತಾ ಇಲಾಖೆಗೆ ತೃತೀಯ ಬಹುಮಾನ

ಮೈಸೂರು: ದಸರಾ 2024 ರ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳ ವಿಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ತೃತೀಯ ಬಹುಮಾನ ದೊರೆತಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನಸಾಮಾನ್ಯರ ಬದುಕಿನಲ್ಲಿ ಆಗುತ್ತಿರುವ ಗುಣಾತ್ಮಕ ಬದಲಾವಣೆಗಳು,ಮಹಿಳಾ ಸಬಲೀಕರಣಕ್ಕೆ ದೊರೆಯುತ್ತಿರುವ ಪ್ರೋತ್ಸಾಹ , ಯವಜನರಿಗೆ ಸಿಗುತ್ತಿರುವ ಭರವಸೆ ಮೊದಲಾದ ಅಂಶಗಳನ್ನು ಪರಿಣಾಮಕಾರಿಯಾಗಿ ವಸ್ತು ಪ್ರದರ್ಶನದಲ್ಲಿ ಇಲಾಖೆ ನಿರ್ಮಿಸಿದ್ದ ಮಳಿಗೆಯಲ್ಲಿ ಆಕರ್ಷಕ ವಿನ್ಯಾಸಗಳನ್ನು ಅನಾವರಣಗೊಳಿಸಲಾಗಿತ್ತು.

ಇಂದು ಸಂಜೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್ ಅವರು ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದೇಶ್ವರಪ್ಪ ಹಾಗೂ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ  ಗೌರವಿಸಿದರು.

Tags:
error: Content is protected !!