Mysore
17
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಮೈಸೂರು: ಜನವರಿ 14 ರಿಂದ ಜನವರಿ 19 ರವರೆಗೆ ಬಹುರೂಪಿ ನಾಟಕೋತ್ಸವ

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಯಶಸ್ವಿಗೆ ಅಧಿಕಾರಿಗಳು ಕೈಜೋಡಿಸಿ – ಡಾ. ಪಿ ಶಿವರಾಜು

ಮೈಸೂರು: ಜನವರಿ 14 ರಿಂದ 19 ವರೆಗೆ ಕರ್ನಾಟಕ ಕಲಾ ಮಂದಿರದಲ್ಲಿ ರಾಷ್ಟ್ರೀಯ ಬಹುರೂಪಿ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ ನಾಟಕೋತ್ಸವವನ್ನು ಯಶಸ್ವಿಗೊಳಿಸಲು ಸಹಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ತಿಳಿಸಿದರು.

ಇಂದು(ಜ.3) ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಬಹುರೂಪಿ ನಾಟಕೋತ್ಸವ -2025ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಮೈಸೂರಿಗೆ ರಂಗಾಯಣ ಹೆಮ್ಮೆಯ ಸಂಕೇತ. ನಾಗರೀಕ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಟಕಗಳನ್ನು ಆಯೋಜಿಸಲಾತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮಹಾನಗರ ಪಾಲಿಕೆಯು ಕಲಾಮಂದಿರ ಹಾಗೂ ರಂಗಾಯಣದ ಸ್ವಚ್ಚತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರು, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ಜೊತೆಗೆ ನಗರದ ಪ್ರಮುಖ ಸ್ಥಳಗಳಲ್ಲಿ  ಡಿಜಿಟಲ್ ಸ್ಕ್ರಿನ್ ಮೂಲಕ ಉತ್ಸವದ ಪ್ರಚಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಾಟಕೋತ್ಸವದ ದಿನಗಳಲ್ಲಿ ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧ ಬಡಾವಣೆಗಳಿಗೆ ಸಾರಿಗೆ ಬಸ್ ಸೌಲಭ್ಯ ಒದಗಿಸಬೇಕು. ಶಾಲಾ-ಕಾಲೇಜು, ಶಿಕ್ಷಕರು ಹಾಗೂ ಮಕ್ಕಳು ನಾಟಕೋತ್ಸವದಲ್ಲಿ ಭಾಗವಹಿಸಬೇಕು ಎಂದರು.

ಮಕ್ಕಳ ನಾಟಕೋತ್ಸವಕ್ಕೆ ಪ್ರತ್ಯೇಕ ವೇದಿಕೆ

ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಮಾತನಾಡಿ, ರಂಗಾಯಣ ಪ್ರಾರಂಭವಾಗಿ 35 ವರ್ಷಗಳು ಸಂದಿವೆ. ಬಹುರೂಪಿ ನಾಟಕೋತ್ಸವದಲ್ಲಿ 6 ದಿನಗಳ ಕಾಲ 24 ನಾಟಕಗಳು ಪ್ರದರ್ಶನವಾಗಲಿವೆ.ಕನ್ನಡದ ಜೊತೆಗೆ  ಬೇರೆ ಬೇರೆ ಭಾಷೆಯ ನಾಟಕಗಳು ಇರಲಿವೆ. ಈ ಬಾರಿ ಮಕ್ಕಳಿಗಾಗಿ ಮಕ್ಕಳ ನಾಟಕೋತ್ಸವಕ್ಕೆ ಪ್ರತ್ಯೇಕವಾಗಿ ಒಂದು ವೇದಿಕೆ ಮಾಡಲಾಗುತ್ತಿದೆ. ಎಲ್ಲಾ ಇಲಾಖೆಗಳ ಸಹಕಾರ ನೀಡುವ ಮೂಲಕ ನಾಟಕೋತ್ಸವ ಯಶಸ್ವಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜವರೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

Tags:
error: Content is protected !!