Mysore
26
broken clouds
Light
Dark

ಮೈಸೂರು: ಹಿರಿಯ ಸ್ವಾಮೀಜಿಯ ಬರ್ಬರ ಹತ್ಯೆ

ಮೈಸೂರು: ಇಲ್ಲಿನ ಸಿದ್ದಾರ್ಥನಗರದ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ(90) ಅವರನ್ನು ಸೋಮವಾರ(ಜೂ.10) ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಲಾಗಿದೆ.

ಸ್ವಾಮೀಜಿ ಅವರ ಆಪ್ತ ಸಹಾಯಕ ರವಿ(60) ಎಂಬಾತನಿಂದ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸ್ವಾಮೀಜಿಯ ಆಪ್ತ ಸಹಾಯಕ ರವಿ ಕುಡಿದ ಮತ್ತಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿಯನ್ನು ಕೊಲೆ ಮಾಡಿದ್ದಾನೆ. ಘಟನೆ ಸ್ಥಳಕ್ಕೆ ಡಿಸಿಪಿ ಮುತ್ತುರಾಜ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಯಾದ ಸ್ವಾಮೀಜಿ ಅತ್ಯಂತ ಹಿರಿಯರು ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂದು ಗೊತ್ತಿಲ್ಲ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ಮಠದದಲ್ಲಿದ್ದವರು ಆಗ್ರಹಿಸಿದ್ದಾರೆ.