ಮೈಸೂರು

ಮೈಸೂರು| ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಪ್ರತಿಭಟನೆ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ ಹೇಳಿಕೆ ಕುರಿತು ನಗರದ ವಿವಿಧ ಕಡೆಗಳಲ್ಲಿ ಬಿಜೆಪಿಯ ಮುಖಂಡಉ ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಇಂದು(ಮಾರ್ಚ್.‌25) ಕೆ.ಆರ್‌.ಕ್ಷೇತ್ರ, ಎನ್‌.ಆರ್‌.ಕ್ಷೇತ್ರ, ಚಾಮರಾಜ ಕ್ಷೇತ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಜೆಪಿಯೂ ಪ್ರತಿಭಟನೆ ನಡೆಸಿತು. ಅಂತೆಯೇ ಮೈಸೂರಿನ ಟೌನ್‌ ಹಾಲ್‌ ಬಳಿ ಮಾಜಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ್ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾವಣೆ ಕುರಿತು ಡಿಕೆಶಿ ಹೇಳಿಕೆ ಖಂಡಿಸಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕ ಎಲ್‌.ನಾಗೇಂದ್ರ ಅವರು, ಮುಸಲ್ಮಾನರಿಗೆ ಮೀಸಲಾತಿ ನೀಡುವುದಕ್ಕೆ ಸಂವಿಧಾನ ಬದಲಾವಣೆ ಮಾಡುತ್ತೇವೆಂದು ಹೇಳುತ್ತಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಲು ಹೊರಟರೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಇನ್ನು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡುವವರೆಗೂ ಬಿಡುವುದಿಲ್ಲ. ಮೈಸೂರಿನಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ನಿರಂತ ಧರಣಿ ನಡೆಸುತ್ತೇವೆ ಎಂದರು.

 

ಅರ್ಚನ ಎಸ್‌ ಎಸ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

11 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

14 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

17 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

18 hours ago