ಮೈಸೂರು

ಮೈಸೂರು | ಮಹಿಳೆಗೆ ಬ್ಲ್ಯಾಕ್ ಮೇಲ್; ಇಬ್ಬರು ಪತ್ರಕರ್ತರು ಸೇರಿ ಮೂವರ ಬಂಧನ

ಮೈಸೂರು: ಮಹಿಳೆಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಹೊರಸಿದ್ದಲ್ಲದೆ, ಅವರಿಗೆ ಬೆದರಿಕೆಯೊಡ್ಡಿ ಚಿನ್ನದ ಓಲೆ ಕಸಿದುಕೊಂಡ ಆರೋಪದ ಮೇರೆಗೆ ಸಮಾಜ ಸೇವಕ ಸೇರಿದಂತೆ ಇಬ್ಬರು ಪತ್ರಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಸಮಾಜ ಸೇವಕ ಕೆ.ಎಚ್.ಹನುಮಂತರಾಜ್, ಪತ್ರಕರ್ತರಾದ ರವಿಚಂದ್ರ ಹಂಚ್ಯಾ ಹಾಗೂ ಮಂಜುನಾಥ್‌ ರನ್ನ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಪತ್ರಕರ್ತ ಸೂರ್ಯವರ್ಧನ್, ಸಮಾಜ ಸೇವಕರೆಂದು ಬಿಂಬಿಸಿಕೊಂಡಿದ್ದ ಯೋಗೇಶ್ ಹಾಗೂ ದೊರೆಸ್ವಾಮಿ ತಲೆಮರೆಸಿಕೊಂಡಿದ್ದಾರೆ.

ಘಟನೆ ಹಿನ್ನೆಲೆ:
ನಾವು ಮಾಧ್ಯಮದವರು ಎಂದು ಹೇಳಿಕೊಂಡ ಆರೋಪಿಗಳು ಡಿ.೨೮ರಂದು ಸಂಜೆ ನಗರದ ಹೆಬ್ಬಾಳಿನ ಮಹಿಳೆಯ ಮನೆಗೆ ಹೋಗಿದ್ದಾರೆ. ನೀವು ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ ಎಂದು ಬೆದರಿಸಿದ ಅವರು, ನಮ್ಮೊಂದಿಗೆ ಪೊಲೀಸರೂ ಬಂದಿದ್ದಾರೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದು ಹೇಳಿದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ನಾನು ವೇಶ್ಯಾವಾಟಿಕೆ ನಡೆಸುತ್ತಿಲ್ಲ ಎಂದರೂ ಒಪ್ಪದ ಅವರು, ಈ ವಿಚಾರವನ್ನು ಎಲ್ಲಿಯೂ ಹೇಳದಿರಲು ೧ ಲಕ್ಷ ರೂ. ಹಣ ನೀಡಬೇಕು ಎಂದು ಬೆದರಿಕೆಯೊಡ್ಡಿದರು. ನನ್ನ ಬಳಿ ಅಷ್ಟು ಹಣವಿಲ್ಲವೆಂದು ಆಕೆ ಹೇಳಿದ ವೇಳೆ ಕಿವಿಯಲ್ಲಿರುವ ಚಿನ್ನದ ಓಲೆಯನ್ನು ಬಿಚ್ಚಿಸಿ ಪಡೆದರು ಎಂದು ತಿಳಿಸಿದ್ದಾರೆ.

ನಂತರ ಹಣವನ್ನು ಆದಷ್ಟು ಬೇಗ ನೀಡುವಂತೆ ತಿಳಿಸಿ ಅವರು ತೆರಳಿದ್ದರು. ಘಟನೆಯ ಬಳಿಕ ದೂರು ನೀಡಿದ್ದು, ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಕಿವಿಯೋಲೆ ನೀಡಿರುವ ವಿಚಾರವನ್ನು ಮನೆಯಲ್ಲಿ ತಿಳಿಸಿರಲಿಲ್ಲ. ಅವರನ್ನು ಕರೆದು ಎಚ್ಚರಿಕೆ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದೆ. ನಂತರ ಆರೋಪಿಗಳು ಓಲೆ ವಾಪಸ್ ನೀಡಿ, ೧ ಲಕ್ಷ ರೂ. ನೀಡುವಂತೆ ಬೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಹಿಳೆಯ ದೂರನ್ನು ಗಂಭೀರವಾಗಿ ಪರಿಗಣಿಸಿದ್ದು, ಉಳಿದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…

4 mins ago

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡಿಸಿದ ಅಮಿತ್‌ ಶಾ

ನವದೆಹಲಿ: ಕೇಂದ್ರ ಸಚಿವ ಅಮಿತ್‌ ಶಾ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ ಪ್ರಸ್ತಾವನೆಯು…

33 mins ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

53 mins ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

1 hour ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

2 hours ago