ಮೈಸೂರು : ಹಾಡ ಹಗಲೇ ಹುಲಿ ದಾಳಿಗೆ 7ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್‍ಡಿ.ಕೋಟೆ ತಾಲೂಕಿನ ಸಿದ್ಧಾಪುರ ಬಳಿಯ ಕಲ್ಲಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ.
ಕಲ್ಲಹಟ್ಟಿ ಗ್ರಾಮದ ಚರಣ್ (7) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಮರದ ಕೆಳಗೆ ಕುಳಿತಿದ್ದ ಬಾಲಕನ ಮೇಲೆ ಹುಲಿ ದಾಳಿ ನಡೆಸಿದೆ. ಚರಣ್ ಪೋಷಕರೊಂದಿಗೆ ತೆರಳಿ ಜಮೀನಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ. ಕೆಲಸದ ನಡುವೆ ನೋಡಿದಾಗ ಕ್ಷಣದಲ್ಲಿ ಬಾಲಕ ಚರಣ್ ಕಣ್ಮರೆಯಾಗಿದ್ದು ಅಲ್ಲಿದ್ದ ಪೋಷಕರು ಪುತ್ರನಿಗಾಗಿ ಹುಡುಕಾಡಿದ್ದಾರೆ.
ಪೋಷಕರು ಜಾಡು ಹಿಡಿದು ಹುಡುಕಿದಾಗ ಕೊಂಚ ದೂರದಲ್ಲಿ ಬಾಲಕನನ್ನು ಹುಲಿ ತಿಂದು ಹಾಕಿದ್ದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಬಾರದಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…