ಮೈಸೂರು

ʼಮೈಸೂರು ಚಲೋʼಗೆ ಸಮಾರೋಪ ಇಂದು; ಸಿಎಂ ತವರಲ್ಲಿ ದೋಸ್ತಿಗಳ ಸವಾಲ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸಿನ ಶಕ್ತಿ ಪ್ರದರ್ಶನ ನಡೆದ ಮೈದಾನದಲ್ಲಿಯೇ ಇಂದು(ಆ.10) ಬಿಜೆಪಿ-ಜೆಡಿಎಸ್‌ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಬೃಹತ್‌ ವೇದಿಕೆ ಸಜ್ಜಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳ ಕುರಿತು ಆ.3 ರಂದು ಬೆಂಗಳೂರಿನ ಕೆಂಗೇರಿ ಸಮೀಪ ಬಿಜೆಪಿ-ಜೆಡಿಎಸ್‌ ಆರಂಭಿಸಿದ ಪಾದಯಾತ್ರೆ ಆ.9ರ ಸಂಜೆ ಮೈಸೂರು ತಲುಪಿದ್ದು, ಇಂದು(ಆ.10) ನಡೆಯುವ ಬೃಹತ್‌ ಸಮಾವೇಶದೊಂದಿಗೆ ಪಾದಯಾತ್ರೆ ಪೂರ್ಣಗೊಳ್ಳಲಿದೆ.

ನಿನ್ನೆ(ಆ.10)ನಡೆದ ಕಾಂಗ್ರೆಸ್‌ನ ಜನಾಂದೋಲದಲ್ಲಿ ಸಿಎಂ,ಡಿಸಿಎಂ ಹಾಗೂ ಸಚಿವರು ಮೈತ್ರಿ ಪಕ್ಷಗಳಿಗೆ ವಾಗ್ದಾಳಿ ನಡೆಸಿದ ರೀತಿಯಲ್ಲೇ ವಿಪಕ್ಷಗಳು ಕೂಡ ವಾಗ್ದಾಳಿ ನಡೆಸಲು ರಣತಂತ್ರ ರೂಪಿಸಿದ್ದಾರೆ.

ಇಂದಿನ ದೋಸ್ತಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ವಿರುದ್ಧ ರಣಕಹಳೆ ಮೊಳಗಲಿದೆ. ಜೊತೆಗೆ ಕಾಂಗ್ರೆಸ್‌ ಅಕ್ರಮದ ಬಗ್ಗೆ ಇನ್ನಷ್ಟು ಗಟ್ಟಿ ಧ್ವನಿಯಲ್ಲಿ ಟೀಕೆಪ್ರಹಾರ ನಡೆಸುವ ಸಾಧ್ಯತೆಯಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

23 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

1 hour ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago