ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ.
ನಾಳೆ ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರು, ಉಪಹಾರ, ಪ್ರಸಾದ ವಿತರಣೆ, ವಾಹನಗಳ ನಿಲುಗಡೆ, ಶೌಚಾಲಯ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಿದ್ಧತೆ ನಡೆಸಲಾಗಿದೆ.
ಸರತಿ ಸಾಲಿನಲ್ಲಿ ದರ್ಶನಕ್ಕೆ ಹೋಗುವ ಭಕ್ತರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದ್ದು, ನೂಕುನುಗ್ಗಲು ಉಂಟಾಗಬಹುದು ಎಂದು ಬ್ಯಾರಿಕೇಡ್ ವ್ಯವಸ್ಥೆ, ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.
ಇನ್ನೂ ಚಾಮುಂಡಿಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಚಾಮುಂಡಿಬೆಟ್ಟದ ಪಾದದಲ್ಲೂ ಹಲವಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಲಲಿತ ಮಹಲ್ ಹೆಲಿಪ್ಯಾಡ್ ಬಳಿ ನೂರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬೆಟ್ಟಕ್ಕೆ ತೆರಳುವ ಬಸ್‌ಗಳು ನಿಲ್ಲುವ ಸ್ಥಳಗಳಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಇನ್ನೂ ನಾಳಿನ ಬಿಗಿ ಭದ್ರತೆಯ ಬಗ್ಗೆ ಇಂದು ರಾಜೇಂದ್ರ ಕಲಾಮಂದಿರದಲ್ಲಿ ಎಲ್ಲಾ ಪೊಲೀಸರಿಗೂ ಸೂಚನೆ ನೀಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಎಲ್ಲರೂ ಕೆಲಸ ಮಾಡಬೇಕು. ಬೆಟ್ಟಕ್ಕೆ ಬರುವ ಗಣ್ಯಾತಿಗಣ್ಯರಿಗೂ ಯಾವುದೇ ತೊಂದರೆಯಾಗಬಾರದು. ಈ ಹಿನ್ನೆಲೆಯಲ್ಲಿ ಎಲ್ಲರೂ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…