ಮೈಸೂರು : ಮೈಸೂರು ರಂಗಾಯಣದ ವತಿಯಿಂದ ಏಪ್ರಿಲ್ 14 ರಿಂದ ಮೇ 10 ರವರೆಗೆ ʻಚಿಣ್ಣರ ಮೇಳʼವನ್ನು ರಂಗಾಯಣದ ಆವರಣದಲ್ಲಿ ನಡೆಸಲು ಯೋಜಿಸಲಾಗಿದ್ದು, ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಅರ್ಜಿ ವಿತರಣೆ ಮಾಡಲಾಗುತ್ತಿದೆ.
2025 ಮಾರ್ಚ್ 31 ಕ್ಕೆ 7 ವರ್ಷಗಳು ತುಂಬಿದ ಮತ್ತು ಈ ದಿನಾಂಕಕ್ಕೆ 15 ವರ್ಷ ಮೀರಿರದ ಮಕ್ಕಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಏಪ್ರಿಲ್ 06 ರಂದು ಬೆಳಿಗ್ಗೆ 10 ಗಂಟೆಗೆ ರಂಗಾಯಣದ ಕಚೇರಿಯಲ್ಲಿ ಒಬ್ಬರಿಗೆ ಒದರಂತೆ ಅರ್ಜಿ ವಿತರಿಸಲಾಗುವುದು.
ಪ್ರತಿ ಅರ್ಜಿಯ ಶುಲ್ಕ ರೂ. 100/- ಗಳಾಗಿದ್ದು, 250 ಅರ್ಜಿಗಳನ್ನು ಮಾತ್ರ ನೀಡಲಾಗುವುದು. ಮೊದಲು ಬಂದವರಿಗ ಮೊದಲ ಆದ್ಯತೆ ಸಿಗಲಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 09 ಸಂಜೆ 05 ಗಂಟೆಯೊಳಗೆ ರಂಗಾಯಣದ ಕಛೇರಿಗೆ ಖುದ್ದಾಗಿ ಸಲ್ಲಿಸಬೇಕು. ಚಿಣ್ಣರ ಮೇಳದ ಪ್ರವೇಶ ಶುಲ್ಕ ಮಗುವೊಂದಕ್ಕೆ ರೂ.3,500/- ಗಳ ಈ ಮೊತ್ತವನ್ನು ಉಪನಿರ್ದೇಶಕರು, ರಂಗಾಯಣ ಮೈಸೂರು ಇವರ ಹೆಸರಿಗೆ ಡಿ.ಡಿ ತೆಗೆದು ಅರ್ಜಿ ಜೊತೆ ಲಗತ್ತಿಸುವುದು.
ಮಗುವಿನ ಜನ್ಮದಿನದ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್ ಪ್ರತಿ ಅಥವಾ ಮಗುವಿನ ಹೆಸರು ನಮೂದಿಸಿರುವ ಜನನ ಪ್ರಮಾಣಪತ್ರವನ್ನು ಅರ್ಜಿ ಜೊತೆ ಲಗತ್ತಿಸಬೇಕು. ಅರ್ಜಿಯಲ್ಲಿ ಮತ್ತು ರಸೀದಿಯಲ್ಲಿ ಕಡ್ಡಾಯವಾಗಿ ಮಗುವಿನ ಹೆಸರನ್ನು ಬರೆಸಿ ರೂ. 100/- ಗಳನ್ನು ಪಾವತಿಸಿ ರಸೀದಿಯೊಂದಿಗೆ ಅರ್ಜಿಯನ್ನು ಪಡೆಯುವುದು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ರಸೀದಿಯೊಂದಿಗೆ ಮರಳಿ ಸಲ್ಲಿಸಬೇಕು ಎಂದು ರಂಗಾಯಣದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…