ಮೈಸೂರು

ಸ್ವಚ್ಛ ಸರ್ವೇಕ್ಷಣ್‌ ಅಭಿಯಾನ ರಾಯಭಾರಿಗಳಾಗಿ ವಿವಿಧ ಕ್ಷೇತ್ರಗಳ ಸಾಧಕರ ನೇಮಕ: ಮೈ.ಮ.ಪಾಲಿಕೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್‌ ಅಭಿಯಾನ-2024ರಲ್ಲಿ ಮೈಸೂರು ಉತ್ತಮ ಶ್ರೇಯಾಂಕ ಪಡೆಯುವ ಉದ್ದೇಶದಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ರಾಯಭಾರಿಗಳಾಗಿ ನೇಮಿಸಲಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು 2014 ರಿಂದ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆ ನಡೆಸುತ್ತಿದೆ. ಇಲ್ಲಿಯವರೆಗೂ ಮೈಸೂರು ನಗರವು ಉತ್ತಮ ಶ್ರೇಯಾಂಕಗಳನ್ನು ಗಳಿಸುತ್ತಾ ಬಂದಿದೆ. ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್ 2024 ರಲ್ಲಿಯೂ ಕೂಡ ಮೈಸೂರು ನಗರ ಭಾಗವಹಿಸುತ್ತಿದೆ. ಹೀಗಾಗಿ ಫೆಬ್ರವರಿ.15 ರಂದು ದೇಶದ್ಯಾದಂತ ಸರ್ವೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇನ್ನೂ ಈ ಸರ್ವೇ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯೂ ಉತ್ತಮ ಶ್ರೇಯಾಂಕಗಳಿಸುವ ಸಲುವಾಗಿ ಇಂದು(ಫೆಬ್ರವರಿ.12) ಶ್ರೀ ಜಯಚಾಮರಾಜ ಒಡೆಯರ್‌ ಸಭಾಂಗಣದಲ್ಲಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಈ ಕೆಳಕಂಡ ಸಾಧಕರುಗಳನ್ನು ಸ್ವಚ್ಛತಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

1. ಕ್ರೀಡಾ ಕ್ಷೇತ್ರ- ಕ್ರಿಕೆಟ್‌ ಆಟಗಾರ ಜಾವಗಲ್‌ ಶ್ರೀನಾಥ್‌

2. ಕ್ರೀಡಾ ಕ್ಷೇತ್ರ- ಮಹಿಳಾ ಕ್ರಿಕೆಟ್‌ ಆಟಗಾರ್ತಿ ವೇದಾಕೃಷ್ಣ ಮೂರ್ತಿ

3. ಸಂಗೀತ ಕ್ಷೇತ್ರ- ಗಾಯಕಿ ಅನನ್ಯ ಭಟ್‌

4. ಸಾಮಾಜಿಕ ಮಾಧ್ಯಮ- ಸೋಷಿಯಲ್‌ ಮೀಡಿಯಾ ಇನ್ಫೂಯೇನ್ಸರ್‌ ಧರ್ಮೇಂದ್ರ

5. ಚಲನಚಿತ್ರ ಕ್ಷೇತ್ರ- ನಟಿ ಅಮೃತಾ ಅಯ್ಯಂಗಾರ್‌

6. ಪರ್ವತಾ ರೋಹಿ- ಡಾ.ಉಷಾ ಹೆಗಡೆ

7. ಕ್ರೀಡಾ ಕ್ಷೇತ್ರ- ಖೋ-ಖೋ ಆಟಗಾರ್ತಿ ಬಿ.ಚೈತ್ರ

ಮೈಸೂರು ನಗರದ ಸ್ವಚ್ಛತೆಗೆ ಹಾಗೂ ನೈರ್ಮಲ್ಯವನ್ನು ಕಾಪಾಡುವ ಸಲುವಾಗಿ ಸ್ವಯಂಪ್ರೇರಿತರಾಗಿ ಸ್ವಚ್ಛತಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪಾಲಿಕೆಯೊಂದಿಗೆ ಕೈ ಜೋಡಿಸುತ್ತಿರುವ ಈ ಕೆಳಕಂಡ ವ್ಯಕ್ತಿಗಳನ್ನು ಸ್ವಚ್ಛತಾ ಚಾಂಪಿಯನ್‌ಗಳೆಂದು ಗುರುತಿಸಿ ಗೌರವಿಸಲಾಯಿತು.

1.ಡಾ.ಪಿ.ಎಸ್‌.ಮಧುಸೂದನ್‌

2. ಲೀಲಾ ವೆಂಕಟೇಶ್‌

3. ಡಾ.ಅಜಯ್‌ ಕುಮಾರ್‌ ಜೈನ್‌

4. ಡಾ.ಸ್ವಪ್ನ

5. ಎನ್‌. ರಾಘವನ್‌

6. ಸೈಯದ್‌ ಅಬ್ದುಲ್‌ ಅಜೀಜ್‌

7. ಅಮೂಲ್ಯ

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

54 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

55 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

57 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

1 hour ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago