Mysore
24
few clouds

Social Media

ಸೋಮವಾರ, 05 ಜನವರಿ 2026
Light
Dark

ಮೈಸೂರು : ಕ್ಷುಲ್ಲಕ ಕಾರಣ ಎರಡು ಗುಂಪುಗಳ ನಡುವೆ ಗಲಾಟೆ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕ್ಲುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಧ್ಯ ರಸ್ತೆಯಲ್ಲಿಯೇ ಗಲಾಟೆ ನಡೆದಿದೆ.

ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಮಹದೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಜಾತ್ರೆಗೆ ಆಗಮಿಸಿದ್ದ ಎರಡು ಗುಂಪಿನ ಯುವಕರ ಮಧ್ಯೆ ನಡು ರಸ್ತೆಯಲ್ಲೇ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿದೆ.

ಈ ಗಲಾಟೆ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅಲ್ಲದೆ ಯುವಕರ ಗುಂಪಿನ ಗಲಾಟೆಯಲ್ಲಿ ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿದೆ. ಆ ಗಾಯಾಳುಗಳನ್ನು ಮೈಸೂರು ಮೂಲದ ಯುವಕ ದರ್ಶನ್‌ ಎಂದು ಗುರುತಿಸಲಾಗಿದೆ.

ಗಲಾಟೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆಯಲ್ಲಿ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಇನ್ನು ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!