ಮೈಸೂರು: ನೂರು ವರ್ಷದ ಇತಿಹಾಸವಿರುವ ಮಂಟಪ ಹಾಗೂ ಕಲ್ಯಾಣಿ ಉಳಿವಿಗಾಗಿ ಆಗ್ರಹಿಸಿ ಪ್ರತಿಭಟನೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಮೈಸೂರಿನ ರಾಜೇಂದ್ರನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಸಿಂಗರಿಶೆಟ್ಟಿ ಕಲ್ಯಾಣಿ ಪುನರುಜ್ಜೀವನಕ್ಕೆ ಒತ್ತಾಯಿಸಿ ಗುಂಪೊಂದು ಪ್ರತಿಭಟನೆ ನಡೆಸಿ, ದೇವಸ್ಥಾನ ಹಾಗೂ ಕಲ್ಯಾಣಿ ಸ್ವಚ್ಚತಾ ಕಾರ್ಯ ಮಾಡಬೇಕು. ಈ ಸಂಬಂಧ ಪಾಲಿಕೆ ಹಾಗೂ ಎಂಡಿಎ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸದರಿ ಸ್ಥಳದಲ್ಲಿ ಅನಧಿಕೃತವಾಗಿ ಶೆಡ್‌ಗಳ ಮಾದರಿಯಲ್ಲಿ ಅಂಗಡಿಗಳು ನಿರ್ಮಾಣ ಆಗಿದೆ. ಹೊಸ ಶೆಡ್ ಮಾದರಿ ಅಂಗಡಿಗಳು ಸಹ ನಿರ್ಮಾಣ ಆಗುತ್ತಿದೆ.
ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತು. ಇದಕ್ಕೆ ಮತ್ತೊಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸಿತು. ಪರಿಣಾಮ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಂಡು ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತು. ಈ ವೇಳೆ ಸ್ಥಳಕ್ಕಾಗಮಿಸಿ ಎನ್.ಆರ್.ಠಾಣೆ ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್ ಅವರು ಎರಡು ಗುಂಪುಗಳನ್ನು ಚದುರಿಸಿ ಗಲಾಟೆಯನ್ನು ತಿಳಿಗೊಳಿಸಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…