ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಮತ್ತೆ ಮೈಕ್ರೋ ಫೈನಾನ್ಸ್ ಹಾವಳಿ ಮರುಕಳಿಸಿದ್ದು, ಸಾಲ ಮರು ಪಾವತಿಸದ ರೈತನ ಮನೆಯನ್ನ ಜಪ್ತಿ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಲದ ಕಂತು ಕಟ್ಟಿಲ್ಲ ಎಂದು ರೈತ ಚಿನ್ನಸ್ವಾಮಿ ಅವರ ಮನೆಯನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಜಪ್ತಿ ಮಾಡಿದ್ದಾರೆ.
ಇದನ್ನು ಓದಿ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಅಡ್ಡಗಟ್ಟಿ ದರೋಡೆ : 25 ಸಾವಿರು ದೋಚಿ ಪರಾರಿ
ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದ ಆದೇಶ ತಂದು ಮನೆಯನ್ನ ಜಪ್ತಿ ಮಾಡಿದ್ದಾರೆ. ಚಿನ್ನಸ್ವಾಮಿ ಕುಟುಂಬ ಮನೆ ನಿರ್ಮಾಣಕ್ಕೆ ಇಕ್ವೀಟಾಸ್ ಸ್ಮಾಲ್ ಫೈನಾನ್ಸ್ ನಲ್ಲಿ 2.70 ಲಕ್ಷ ಸಾಲ ಪಡೆದಿತ್ತು. ಈಗಾಗಲೆ 19 ಕಂತುಗಳ 1,89,000 ಸಾಲ ಮರು ಪಾವತಿಸಿದ್ದು, ಚಿನ್ನಸ್ವಾಮಿ ಪತ್ನಿ ಸಹ ಇಕ್ವೀಟಾಸ್ ಫೈನಾನ್ಸ್ ನಲ್ಲಿ ಗುಂಪು ಸಾಲ ಪಡೆದಿದ್ದರು.
ಆದರೆ ಮನೆ ಸಾಲವನ್ನ ಗುಂಪು ಸಾಲಕ್ಕೆ ವಜಾ ಮಾಡಿಕೊಂಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದು ಈ ಕುರಿತು ಸಾಲ ಮರುಪಾವತಿಗೆ ಕಾಲಾವಕಾಶಕ್ಕಾಗಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕಾಲಾವಕಾಶ ಕೋರಿದರೂ ಮನೆ ಜಪ್ತಿ ಮಾಡಿದ್ದಾರೆಂದು ಚಿನ್ನಸ್ವಾಮಿ ಕುಟುಂಬ ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…