ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಇಲ್ಲಿ ಆಯೋಜಿಸಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಮೈತ್ರಿ ಪಕ್ಷಗಳ ಅವಧಿಯ ಹಗರಣಗಳನ್ನು ತೆರದಿಡಲು ಮುಂದಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಪಡಿಸಿದ್ದಾರೆ.
ಸಿಎಂ ವಿರುದ್ಧ ಗಂಭೀರ ಆಪಾದನೆ ಹೊರಿಸಿ ಹೋರಾಟದ ಹಾದಿ ಹಿಡಿದಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಯಾರಿ ನಡೆಸಿದ್ದಾರೆ. ಅವರೇ ಹೇಳಿದಂತೆ ಪ್ರತಿಪಕ್ಷಗಳ ವಿರುದ್ಧದ ಹಗರಣಗಳ ಆರೋಪದ ಬಗ್ಗೆ ವಿವರವಾಗಿ ಮಾತನಾಡುವ ನಿರೀಕ್ಷೆಯಿದೆ.
ಕಾಂಗ್ರೆಸ್‌ನ ಈ ಬೃಹತ್ ಜನಾಂದೋಲನ ಕಾರ್ಯಕ್ರಮದಕ್ಕೆ ರಾಜ್ಯದ ಹಲವೆಡೆಯಿಂದ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಗರದಲ್ಲೇ ತಂಗಿರುವ ಸಿಎಂ ಸಮಾವೇಶ ಯಶಸ್ಸಿಗೆ ಕಾರ್ಯತಂತ್ರ ರೂಪಿಸಿದ್ದಾರೆ.
ರಸ್ತೆಯುದ್ದಕ್ಕೂ ಕಾಂಗ್ರೆಸ್ ನಾಯಕರ ಬ್ಯಾನರ್, ಕಟೌಟ್ ಗಳು ರಾರಾಜಿಸುತ್ತಿವೆ. ಸಮಾವೇಶದ ಸುತ್ತಲು ಪೊಲೀಸ್ ಬಂದೊಬಸ್ತ್ ಏರ್ಪಡು ಮಾಡಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…