ಮೈಸೂರು: ‘ಬಿಜೆಪಿಯು ಮೀಸಲಾತಿಯನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
‘ಸಂವಿಧಾನ ಬಚಾವೋ–ದೇಶ ಬಚಾವೋ’ ಎಂಬ ಘೋಷಣೆಯಡಿ ಕಾಂಗ್ರೆಸ್ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದಿಂದ ಇಲ್ಲಿನ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ನಡೆದ ಧರಣಿಯಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರು. ಎಲ್ಲರೂ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪಾಲ್ಗೊಂಡಿದ್ದರು.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ‘ಈ ಸರ್ಕಾರವು ಮೀಸಲಾತಿಗೆ ಅಪಾಯ ತಂದಿದೆ. ಗೊಂದಲವನ್ನು ಉಂಟು ಮಾಡುತ್ತಿದೆ. ಚುನಾವಣೆಯಲ್ಲಿ ಗೆಲ್ಲಬೇಕೆಂಬ ದುರುದ್ದೇಶದಿಂದ ನಿಯಮಗಳನ್ನು ಗಾಳಿಗೆ ತೂರಿ ಮೀಸಲಾತಿ ಹೆಚ್ಚಳ ಮಾಡಿದ್ದಾರೆ. ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ ಎನ್ನುವುದು ಗೊತ್ತಿದ್ದರೂ ಮಾಡಿದ್ದಾರೆ’ ಎಂದು ಆರೋಪಿಸಿದರು.
‘ಮೀಸಲಾತಿಯನ್ನೇ ತೆಗೆಯುವ ಒಳ ಸಂಚನ್ನು ಬಿಜೆಪಿಯವರು ನಡೆಸುತ್ತಿದ್ದಾರೆ. ರಾಜಕೀಯ ಲಾಭಕ್ಕೋಸ್ಕರ ಸಮುದಾಯಗಳಿಗೆ ಅಪಾಯ ಆಗುವಂತೆ ಮಾಡಿದರೆ ನಾವು ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
ಶಾಸಕ ತನ್ವೀರ್ ಸೇಠ್ ಮಾತನಾಡಿ, ‘ಒಂದು ಜಾತಿಯ ಮೇಲೆ ಮತ್ತೊಂದು ಜಾತಿ ಎತ್ತಿ ಕಟ್ಟಲು ಮೀಸಲಾತಿ ವಿಷಯದಲ್ಲಿ ಗೊಂದಲ ಸೃಷ್ಟಿಸಲಾಗಿದೆ. ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ತೆಗೆದಿದ್ದಾರೆ. ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಬಿಜೆಪಿಯವರು ಹಿಂದೆಯೇ ಹೇಳಿದ್ದಾರೆ. ಜಾತ್ಯತೀತ ತತ್ವದ ಮೇಲೆ ಅವರಿಗೆ ನಂಬಿಕೆ ಇಲ್ಲ. ಯುವಕರಿಗೆ ಕೆಲಸ ಕೊಡುವುದು ಬಿಟ್ಟು ಅಹಿಂಸೆಯ ದಾರಿ ತೋರುತ್ತಿದ್ದಾರೆ’ ಎಂದು ಆರೋಪಿಸಿದರು.
ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ‘ಅವೈಜ್ಞಾನಿಕ, ಅಸಂವಿಧಾನಿಕವಾಗಿ ಮೀಸಲಾತಿ ಹೆಚ್ಚಿಸುವ ನಿರ್ಧಾರ ಮಾಡುವ ಮೂಲಕ ಬಿಜೆಪಿಯು ಸಂವಿಧಾನಕ್ಕೆ ಅಪಪ್ರಚಾರ ಮಾಡಿದೆ. ಜನರ ದಾರಿ ತಪ್ಪಿಸಲಾಗುತ್ತಿದೆ’ ಎಂದು ಗುಡುಗಿದರು.
‘ನಮ್ಮ ಸಂವಿಧಾನವು ಎಲ್ಲರಿಗೂ ಸಮಾನತೆ ಹಾಗೂ ಅವಕಾಶ ನೀಡುವ ಪ್ರಮುಖ ಆಶಯವನ್ನು ಹೊಂದಿದೆ. ಆದರೆ, ಸಂವಿಧಾನದ ಆಶಯ ಬುಡಮೇಲು ಮಾಡಲು ಆರ್‌ಎಸ್‌ಎಸ್ ಹಾಗೂ ಬಿಜೆಪಿಯು ಕೆಲಸ ಮಾಡುತ್ತಿವೆ. ಭಾವನಾತ್ಮಕ ವಿಷಯಗಳ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಿ ಸಂವಿಧಾನಕ್ಕೆ ಮಸಿ ಬಳಿಯುವ ಕೆಲಸದಲ್ಲಿ ತೊಡಗಿದೆ. ಸಂವಿಧಾನ ಹಾಗೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದು ದೂರಿದರು.
ಶಾಸಕ ಜಮೀರ್ ಅಹಮದ್ ಖಾನ್ ಮಾತನಾಡಿ, ‘ನಮಗೆ 28 ವರ್ಷಗಳಿಂದ ಇದ್ದ ಮೀಸಲಾತಿಯನ್ನು ತೆಗೆದಿದ್ದಾರೆ. ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಂಗದಿಂದ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ’ ಎಂದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಮಾತನಾಡಿದರು.
ಮುಖಂಡರಾದ ಚಂದ್ರಮೌಳಿ, ವಾಸು, ಎಂ.ಕೆ.ಸೋಮೇಖರ್, ಕೆ.ಮರೀಗೌಡ, ಹರೀಶ್ ಗೌಡ, ರೋಜಿ ಜಾನ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಆರ್.ಶಿವಣ್ಣ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಕಾಗಲವಾಡಿ ಎಂ.ಶಿವಣ್ಣ, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ ಹಾಜರಿದ್ದರು.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…