Mysore
34
clear sky

Social Media

ಶನಿವಾರ, 15 ಮಾರ್ಚ್ 2025
Light
Dark

ಮೈಸೂರು | ಕುಂಭಮೇಳಕ್ಕೆ ಕ್ಷಣಗಣನೆ ; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಮೈಸೂರು: ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ.

ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಕರ್ನಾಟಕದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ.

ಅಂದು ಬೆಳಗ್ಗೆ 9ರಿಂದ 9.30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ.

ಭರದ ಸಿದ್ಧತೆ

ಕುಂಭಮೇಳದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಾಣ, ಸ್ವಚ್ಛತಾ, ಲೈಟಿಂಗ್ಸ್ ಅಳವಡಿಕೆ ಕಾರ್ಯ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರನ್ನು ನಿಯೋಜನೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ.

ಧಾರ್ಮಿಕ ಕಾರ್ಯಕ್ರಮಗಳು
ಫೆ.10ರಂದು ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.

Tags: