ಮೈಸೂರು: ಹಾಲು, ಮೊಸರು, ವಿದ್ಯುತ್, ಮೆಟ್ರೊ ಪ್ರಯಾಣ, ಸಾರ್ವಜನಿಕ ಸಾರಿಗೆ, ಡೀಸೆಲ್, ಪೆಟ್ರೋಲ್ ದರ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ರಾಮಸ್ವಾಮಿ ವೃತ್ತದ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಅಗತ್ಯ ವಸ್ತುಗಳು ಸೇರಿದಂತ ಮೊದಲಾದವುಗಳ ಬೆಲೆ ಏರಿಕೆ ಮಾಡಿರುವುದರಿಂದ ಜನತೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಪೈಪೋಟಿಗೆ ಬಿದ್ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜನಸಾಮಾನ್ಯರ ಬಗ್ಗೆ ಕಾಳಜಿಯಿದ್ದರೆ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಸಿಪಿಐ(ಎಂ) ಮೈಸೂರು ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಮುಜೀಬ್, ಸದಸ್ಯರಾದ ಎಚ್.ಎಸ್.ಸುನಂದ, ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇ ಗೌಡ, ಕೆ.ಬಸವರಾಜ್, ಜಿ.ಜಯರಾಂ, ಸುಬ್ರಹ್ಮಣ್ಯ, ಪೃಥ್ವಿ, ಕುಮಾರಿ, ಶಕುಂತಲಾ, ಲೀಲಾವತಿ, ಮಂಜುಳಾ, ಅಣ್ಣಪ್ಪ, ಮೆಹಬೂಬ್, ಬಾಲಾಜಿ ರಾವ್, ಕೃಷ್ಣ, ಚಂದ್ರಶೇಖರ್, ರಾಜೇಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…
ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…