ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಗೆ ಚಾಲನೆ ನೀಡಿದರು.
ಮೈಸೂರು ಜಿಲ್ಲೆ ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಯಣದ ಕಾರ್ಯಕ್ರಮ ನಡೆಯಿತು. ಬೆಳಗ್ಗೆ 10ರಿಂದ 10:28ರ ಶುಭ ತುಲಾ ಲಗ್ನದಲ್ಲಿ ದಸರಾ ಗಜಪಡೆಗೆ ಪೂಜೆ ಸಲ್ಲಿಸಲಾಯಿತು.
ಪೂಜೆ ಸಲ್ಲಿಸಿದ ಬಳಿಕ ಫಲತಾಂಬೂಲ ನೀಡುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು. ನಂತರ ದಸರಾ ಗಜಪಡೆ ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿವೆ.
ಮೊದಲ ತಂಡದ ಗಜಪಯಣದಲ್ಲಿ ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಶ್ರೀಕಂಠ ಹಾಗೂ ಹೆಣ್ಣು ಆನೆಗಳಾದ ಲಕ್ಷ್ಮೀ ಮತ್ತು ಕಾವೇರಿ ಸೇರಿ 9 ಆನೆಗಳಿವೆ.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…