ಮೈಸೂರು

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಶೆಡ್‌ಗಳ ನಿರ್ಮಾಣ ಕಾರ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ.

ಆಗಸ್ಟ್.‌4ರಂದು ಕಾಡಿನಿಂದ ನಾಡಿಗೆ ಗಜಪಡೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಕಾವಾಡಿಗರು ಹಾಗೂ ಮಾವುತರ ಕುಟುಂಬಸ್ಥರು ತಂಗಲು ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಗಜಪಡೆಗಳ ಆರೈಕೆ ಮಾಡಲು ಮೈಸೂರಿಗೆ ಬರುವ ಕಾವಾಡಿಗರು ಹಾಗೂ ಮಾವುತರು ಸುಮಾರು ಎರಡು ತಿಂಗಳ ಕಾಲ ಅರಮನೆ ಆವರಣದಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಮರ ಮತ್ತು ಕಬ್ಬಿಣದ ಪೋಲ್ ಮತ್ತು ಜಂಕ್‌ಶೀಟ್‌ ತಗಡುಗಳನ್ನು ಬಳಸಿ ತಾತ್ಕಾಲಿಕ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಮೊದಲ ಹಂತದಲ್ಲಿ ಬರುವ 9 ಆನೆಗಳಿಗೆ ಪ್ರತ್ಯೇಕ ಶೆಡ್ ನಿರ್ಮಾಣ ಮಾಡಲಾಗುತ್ತಿದ್ದು, ಮೈಸೂರಿಗೆ ಗಜಪಡೆ ಎಂಟ್ರಿ ಆದ ಬಳಿಕ ನಾಡಹಬ್ಬ ದಸರಾ ಮಹೋತ್ಸವ ಮತ್ತಷ್ಟು ರಂಗೇರಲಿದೆ.

ಆಂದೋಲನ ಡೆಸ್ಕ್

Recent Posts

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

3 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

11 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

16 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

14 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago