Categories: ಮೈಸೂರು

ಮೈಸೂರು ದಸರಾ ಗಜಪಡೆ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಶ್ರೀಕಂಠನಿಗೆ ಮೊದಲ ಸ್ಥಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು.

ಮೈಸೂರಿನ ಧನ್ವಂತರಿ ಸಾಯಿರಾಂ ತೂಕ ಮಾಪನ ಕೇಂದ್ರದಲ್ಲಿ ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳ ತೂಕ ಪರೀಕ್ಷೆ ನಡೆಯಿತು.

ದಸರಾ ಗಜಪಡೆಯ ಆನೆಗಳ ತೂಕ ಹೀಗಿದೆ:

• ಮಹೇಂದ್ರ – 5,490 ಕೆ.ಜಿ.
• ಲಕ್ಷ್ಮೀ – 3,990 ಕೆ.ಜಿ.
• ಪ್ರಶಾಂತ – 5,205 ಕೆ.ಜಿ.
• ಧನಂಜಯ – 5,530 ಕೆ.ಜಿ.
• ಶ್ರೀರಾಮ – 4,820 ಕೆ.ಜಿ.
• ಕಾವೇರಿ – 3,075 ಕೆ.ಜಿ.
• ಶ್ರೀಕಂಠ – 5,790 ಕೆ.ಜಿ.
• ಏಕಲವ್ಯ – 5,600 ಕೆ.ಜಿ.
• ಗೋಪಿ – 5,170 ಕೆ.ಜಿ.

ಈ ಪೈಕಿ ಶ್ರೀಕಂಠ ಆನೆ 5,790 ಕೆ.ಜಿ. ತೂಕದೊಂದಿಗೆ ಅತಿ ಹೆಚ್ಚು ತೂಕ ಹೊಂದಿದೆ. ನಂತರದ ಸ್ಥಾನದಲ್ಲಿ ಏಕಲವ್ಯ 5,600 ಕೆ.ಜಿ. ಹಾಗೂ ಧನಂಜಯ 5,530 ಕೆ.ಜಿ. ತೂಕ ಹೊಂದಿವೆ.

ಮೈಸೂರು ದಸರಾ ಜಂಬೂಸವಾರಿಗೆ ಸಜ್ಜಾಗುತ್ತಿರುವ ಗಜಪಡೆಯ ಆನೆಗಳ ಆರೋಗ್ಯ ಹಾಗೂ ತೂಕದ ಮೇಲೂ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

19 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

19 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

20 hours ago

ಓದುಗರ ಪತ್ರ: ನಡೆಯಲಿ ಪ್ರಶಾಂತ…!

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…

20 hours ago

ಓದುಗರ ಪತ್ರ: ಜೀವ ಉಳಿಸುವ ಔಷಧಗಳು ಅತಿ ಲಾಭದ ವಸ್ತು ಆಗಬಾರದಲ್ಲವೇ?

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…

20 hours ago

ಓದುಗರ ಪತ್ರ: ‘ಕುಬೇರನ ಮೂಲೆ’ಯಲ್ಲೇ ಕಸದ ಕೊಪ್ಪರಿಗೆ!

ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…

20 hours ago