ಮೈಸೂರು

ಮೈಸೂರು ದಸರಾ | ಗಜಪಯಣಕ್ಕೆ ಸಿದ್ಧತೆ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡದ 9 ಆನೆಗಳನ್ನು ಮೈಸೂರಿಗೆ ಕರೆತರುವ ಗಜಪಯಣಕ್ಕೆ ವೀರನ ಹೊಸಹಳ್ಳಿಯಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆನೆಗಳ ಆರೋಗ್ಯ ತಪಾಸಣೆ ನಡೆಸಿ, ಆನೆ ಆಯ್ಕೆ ಸಮಿತಿಯ ಮೇಲಧಿಕಾರಿಗಳೊಂದಿಗೆ ಚರ್ಚಿಸಿ 14 ಆನೆಗಳನ್ನು ಮೈಸೂರಿಗೆ ಕರೆತರಲು ತೀರ್ಮಾನಿಸಲಾಗಿದೆ. ಈಗಾಗಲೇ ಅನುಮತಿಗಾಗಿ ಇಲಾಖೆಯ ಮುಖ್ಯಸ್ಥರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ. ಆ. 4ರಂದು ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಯಣ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ನಂತರ ಆನೆಗಳನ್ನು ಮೈಸೂರಿಗೆ ಲಾರಿ ಮೂಲಕ ಕರೆತರಲಾಗುವುದು. ಮೈಸೂರಿಗೆ ಕರೆತರಲಾಗುವ ಆನೆಗಳೊಂದಿಗೆ ಬರುವ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗಾಗಿ ಅರಮನೆ ಆವರಣದ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಕಾರ್ಯವು ಇನ್ನೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಡಿಸಿಎಫ್ ಡಾ. ಐ. ಬಿ. ಪ್ರಭುಗೌಡ ಅವರು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು.

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

54 mins ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

60 mins ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

1 hour ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

10 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

10 hours ago