ಮೈಸೂರು : ಇತ್ತೀಚೆಗಷ್ಟೆ ಕರ್ನಾಟಕ ಸರ್ಕಾರ ೨೫ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶಿಸಿತ್ತು. ಇದೀಗ ೨೧ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಕೆ.ವಿ ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಅವರನ್ನ ನೇಮಕ ಮಾಡಲಾಗಿದೆ. ಇನ್ನು ಲಕ್ಷ್ಮೀಕಾಂತ್ ರೆಡ್ಡಿ ಅವರು ಈ ಹಿಂದೆ ಮೈಸೂರು ಪಾಲಿಕೆಯ ಆಯುಕ್ತರಾಗಿದ್ದರು.
ಇನ್ನು ಸರ್ಕಾರಕ್ಕೆ ತಲೆ ನೋವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದ ಬಗ್ಗೆ ಒಂದು ವರ್ಷದ ಹಿಂದೆಯೇ ಕೆ.ವಿ ರಾಜೇಂದ್ರ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಡಾ,ಕೆ.ವಿ ರಾಜೇಂದ್ರ ಅವರನ್ನ ವರ್ಗಾವಣೆ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿ ಕೊಡುತ್ತಿದೆ.