ಮೈಸೂರು

ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ವರ್ಗಾವಣೆ ; ನೂತನ ಡಿಸಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ನೇಮಕ

ಮೈಸೂರು : ಇತ್ತೀಚೆಗಷ್ಟೆ ಕರ್ನಾಟಕ ಸರ್ಕಾರ ೨೫ ಐಪಿಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶಿಸಿತ್ತು. ಇದೀಗ ೨೧ ಐಎಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಕೆ.ವಿ ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಅವರನ್ನ ನೇಮಕ ಮಾಡಲಾಗಿದೆ. ಇನ್ನು ಲಕ್ಷ್ಮೀಕಾಂತ್‌ ರೆಡ್ಡಿ ಅವರು ಈ ಹಿಂದೆ ಮೈಸೂರು ಪಾಲಿಕೆಯ ಆಯುಕ್ತರಾಗಿದ್ದರು.

ಇನ್ನು ಸರ್ಕಾರಕ್ಕೆ ತಲೆ ನೋವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದ ಬಗ್ಗೆ ಒಂದು ವರ್ಷದ ಹಿಂದೆಯೇ ಕೆ.ವಿ ರಾಜೇಂದ್ರ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು.  ಇದೀಗ ಡಾ,ಕೆ.ವಿ ರಾಜೇಂದ್ರ ಅವರನ್ನ ವರ್ಗಾವಣೆ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿ ಕೊಡುತ್ತಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

12 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago