Mysore
30
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ದಕ್ಷಿಣಕಾಶಿ ನಂಜನಗೂಡಿನ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಭೇಟಿ, ಪರಿಶೀಲನೆ

ನಂಜನಗೂಡು: ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿಲಾ ನದಿಗೆ ಬಿಡಲಾಗಿದ್ದು, ನಂಜನಗೂಡಿನ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ.

ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿನಾ ನದಿಗೆ ಬಿಡಲಾಗಿದ್ದು, ಕಪಿಲೆ ತನ್ನ ರೌದ್ರಾವತಾರ ತಾಳಿದ್ದಾಳೆ. ನದಿಯ ಹರಿವು ಹೆಚ್ಚಾಗಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರವಾಹಪೀಡಿತ ಹಳ್ಳಿಕೇರಿ, ಹದಿನಾರು ಕಾಲು ಮಂಟಪ, ಸ್ನಾನಘಟ್ಟ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದ ಲಕ್ಷ್ಮೀಕಾಂತರೆಡ್ಡಿ ಅವರು, ತುರ್ತು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಹಳ್ಳದಕೇರಿ ಬಡಾವಣೆ ಸಾರ್ವಜನಿಕರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರು, ಯಾವುದೇ ಭಯಪಡಬೇಡಿ, ನಿಮಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿ ನಮ್ಮದು ಎಂದು ಭರವಸೆ ನೀಡಿದರು.

 

 

Tags: