ಮೈಸೂರು

ಸಿಎಂ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ನಿರ್ಮಾಣಕ್ಕೆ ಮುಂದಾದ ಮೈಸೂರು ಜಿಲ್ಲಾಡಳಿತ

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ.

ವರುಣ ಕ್ಷೇತ್ರದ ಗುಡುಮಾದನಗಳ್ಳಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ಕಾಮಗಾರಿ ಪ್ರಾರಂಭವಾಗಿದ್ದು, ಜೆಸಿಬಿ ಮೂಲಕ ಕೃಷಿ ಭೂಮಿ ಅಗೆಯುವ ಕಾರ್ಯ ನಡೆಯುತ್ತಿದೆ.

ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್ ನಿರ್ಮಾಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಸ್ಥಳದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರು ಸುಮಾರು 30-40 ವರ್ಷಗಳಿಂದ ಕೃಷಿ ಮಾಡುತ್ತಿದ್ದು, ಕೃಷಿ ಭೂಮಿ ಬೇಡ ಬೇರೆಡೆ ನಿರ್ಮಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದರೂ ರೈತರ ವಿರೋಧದ ನಡುವೆಯೂ ಕಾಮಗಾರಿ ಆರಂಭವಾಗಿದ್ದು, ರೈತರು ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ಇತ್ತ ಕೆಸರು ಗದ್ದೆಯಲ್ಲಿ ಜೆಸಿಬಿ ಮುಳುಗಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

ಆಂದೋಲನ ಡೆಸ್ಕ್

Recent Posts

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

4 mins ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

56 mins ago

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

1 hour ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

2 hours ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

3 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

3 hours ago