ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ.
ವರುಣ ಕ್ಷೇತ್ರದ ಗುಡುಮಾದನಗಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಕಾಮಗಾರಿ ಪ್ರಾರಂಭವಾಗಿದ್ದು, ಜೆಸಿಬಿ ಮೂಲಕ ಕೃಷಿ ಭೂಮಿ ಅಗೆಯುವ ಕಾರ್ಯ ನಡೆಯುತ್ತಿದೆ.
ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್ ನಿರ್ಮಾಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಸ್ಥಳದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತರು ಸುಮಾರು 30-40 ವರ್ಷಗಳಿಂದ ಕೃಷಿ ಮಾಡುತ್ತಿದ್ದು, ಕೃಷಿ ಭೂಮಿ ಬೇಡ ಬೇರೆಡೆ ನಿರ್ಮಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದರೂ ರೈತರ ವಿರೋಧದ ನಡುವೆಯೂ ಕಾಮಗಾರಿ ಆರಂಭವಾಗಿದ್ದು, ರೈತರು ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.
ಇನ್ನು ಇತ್ತ ಕೆಸರು ಗದ್ದೆಯಲ್ಲಿ ಜೆಸಿಬಿ ಮುಳುಗಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…