ಮೈಸೂರು

ಮೈಸೂರಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು: ಜನತೆಗೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ

ಮೈಸೂರು: ಮೈಸೂರಿನಲ್ಲೂ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಭಾರೀ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಡೆಂಗ್ಯೂ ಪ್ರಕರಣಗಳ ಬಗ್ಗೆ ಜನತೆಗೆ ಎಚ್ಚರಿಕೆ ನೀಡಿದರೂ ಕೂಡ ಯಾರೂ ಮುಂಜಾಗ್ರತಾ ಕ್ರಮ ಪಾಲಿಸುತ್ತಿಲ್ಲ. ಈ ಬೆನ್ನಲ್ಲೇ ಮೈಸೂರಿನಲ್ಲೂ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು,  358 ಮಂದಿಗೆ ಡೆಂಗ್ಯೂ ಪಾಸಿಟಿವ್‌ ದೃಢಗೊಂಡಿದೆ.

ತಲೆನೋವು, ಸ್ನಾಯು, ಮೂಳೆ ಅಥವಾ ಕೀಲುನೋವು, ವಾಕರಿಕೆ, ವಾಂತಿ, ಕಣ್ಣುಗಳ ಹಿಂದೆ ನೋವು, ಊದಿಕೊಂಡ ಗ್ರಂಥಿಗಳು ಮತ್ತು ಚರ್ಮದ ಮೇಲೆ ದದ್ದುಗಳ ಜೊತೆಗೆ ನಿಮಗೆ  ಜ್ವರವಿದ್ದರೆ ಯಾರೂ ಕೂಡ ನಿರ್ಲಕ್ಷಿಸಬೇಡಿ. ಈ ರೋಗ ಲಕ್ಷಣಗಳಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.

ಡೆಂಗ್ಯೂ, ಇದು ಈಡಿಸ್‌ ಈಜಿಪ್ಟಿ ಸೊಳ್ಳೆ ಕಚ್ಚುವಿಕೆಯಿಂದ ಉಂಟಾಗುತ್ತದೆ. ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ.

ಮೈಸೂರು ಜಿಲ್ಲೆಯಲ್ಲಿ 2024ರ ಜನವರಿಯಿಂದ ಜೂನ್‌ವರೆಗೆ 2395 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 358 ಮಾದರಿಗಳು ಪಾಸಿಟಿವ್‌ ಎಂದು ದೃಢಪಟ್ಟಿದೆ.

ಇನ್ನೂ ಮೈಸೂರು ನಗರದಲ್ಲಿ 743 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 146 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಮೈಸೂರು ಗ್ರಾಮಾಂತರದಲ್ಲಿ 272 ಜನರಿಗೆ ಪರೀಕ್ಷೆ ಮಾಡಲಾಗಿದ್ದು, 47 ಪಾಸಿಟಿವ್‌ ದೃಢಪಟ್ಟಿದೆ.

ಇನ್ನೂ ಟಿ.ನರಸೀಪುರ ತಾಲ್ಲೂಕಿನಲ್ಲಿ 106 ಮಾದರಿಗಳನ್ನು ಒಳಪಡಿಸಲಾಗಿದ್ದು, ಆರು ಮಾದರಿಗಳು ಪಾಸಿಟಿವ್‌ ಎಂದು ದೃಢಪಟ್ಟಿದೆ. ನಂಜನಗೂಡು ತಾಲ್ಲೂಕಿನಲ್ಲಿ 173 ಮಾದರಿ ಪರೀಕ್ಷೆ ಮಾಡಲಾಗಿದ್ದು, 18 ಪಾಸಿಟಿವ್‌ ದೃಢಪಟ್ಟಿದೆ. ಹೆಚ್.ಡಿ.ಕೋಟೆಯಲ್ಲಿ 14 ಮಂದಿಗೆ ಪಾಸಿಟಿವ್‌ ದೃಢಗೊಂಡಿದ್ದು, ಹುಣಸೂರಿನಲ್ಲಿ 72 ಮಂದಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ.

ಪಿರಿಯಾಪಟ್ಟಣದಲ್ಲಿ 29 ಮಂದಿಗೆ ಪಾಸಿಟಿವ್‌ ಬಂದಿದ್ದು, ಕೆ.ಆರ್.ನಗರ ತಾಲ್ಲೂಕಿನಲ್ಲಿ 22 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ.

ಡೆಂಗ್ಯೂ ಪ್ರಕರಣಗಳು ಹೆಚ್ಚಾಗದಂತೆ ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡುತ್ತಿದ್ದು, ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ನೀರಿನ ತೊಟ್ಟಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಖಾಲಿ ತೆಂಗಿನ ಚಿಪ್ಪುಗಳು ಮತ್ತು ಬಾಟಲಿಯ ಮುಚ್ಚಳಗಳನ್ನು ಸರಿಯಾದ ರೀತಿಯಲ್ಲಿ ಬಿಸಾಡಬೇಕು ಇದರಿಂದ ನೀರು ನಿಲ್ಲುವುದಿಲ್ಲ .

ಈಡಿಸ್‌ ಈಜಿಪ್ಟಿ ಸೊಳ್ಳೆಗಳು ಸಾಮಾನ್ಯವಾಗಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಡೆಂಗ್ಯೂಗೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

2 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago