ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸರ್ಕಾರಿ ನೌಕರರ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಜಿಲ್ಲೆಯ ಎಲ್ಲಾ ಇಲಾಖೆಗಳ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ಸಂಘದ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಏನಾದರೂ ಆಕ್ಷೇಪಣೆ ಇದ್ದಲ್ಲಿ ಜುಲೈ 2 ರಿಂದ 7 ರವರ ಸಂಜೆ 6 ಗಂಟೆಯೊಳಗೆ ಲಿಖಿತವಾಗಿ ಸಂಘದ ಕಚೇರಿಗೆ ಸಲ್ಲಿಸುವಂತೆ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.