ಮೈಸೂರು

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 41.31 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮೊಹಮ್ಮದ್ ರೋಷನ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮಾದಕ ವಸ್ತು ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇಟ್ಟಿದ್ದ ಪೊಲೀಸರು, ಫೆಬ್ರವರಿ 11ರಂದು 3.14 ಗ್ರಾಂ MDMA ವಶಪಡಿಸಿಕೊಂಡು ಎಂ. ಮೊಹಮ್ಮದ್ ಕರೀಂ ಮತ್ತು ನಿಷಾದ್ ಪಾಷ (ಎ2) ಅವರನ್ನು ಬಂಧಿಸಿದ್ದರು. ಆ ಪ್ರಕರಣದಲ್ಲಿ (ಮೊ.ಸಂ 31/2026, ಕಲಂ 22(ಬಿ) ಎನ್‌ಡಿಪಿಎಸ್ ಕಾಯ್ದೆ) ದಾಖಲಾದ ತನಿಖೆಯನ್ನು ಮುಂದುವರಿಸಿ, ನಿಷಾದ್ ಪಾಷನಿಗೆ MDMA ಸರಬರಾಜು ಮಾಡುತ್ತಿದ್ದ ಮೊಹಮ್ಮದ್ ರೋಷನ್ ಅವರನ್ನು ಪತ್ತೆಹಚ್ಚಿ ಬಂಧಿಸಲಾಯಿತು.

ಬಂಧಿತ ಆರೋಪಿಯಿಂದ 41.31 ಗ್ರಾಂ MDMA (ಮೌಲ್ಯ ₹4 ಲಕ್ಷ) ವಶಪಡಿಸಿಕೊಳ್ಳಲಾಗಿದ್ದು, ತನಿಖೆಯಲ್ಲಿ ಆರೋಪಿ ಮೊಹಮ್ಮದ್ ರೋಷನ್ ಇನ್‌ಸ್ಟಾಗ್ರಾಂ ಮೂಲಕ ಬೆಂಗಳೂರಿನ ಅಪರಿಚಿತ ವ್ಯಕ್ತಿಯಿಂದ ಮಾದಕ ವಸ್ತುವನ್ನು ಪಡೆದು ಮೈಸೂರಿನಲ್ಲಿ ಮಾರಾಟ ಮಾಡುತ್ತಿದ್ದುದು ಬಹಿರಂಗವಾಗಿದೆ. ಈತನ ಮೇಲೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಹಿಂದೆಯೇ ಮೊ.ಸಂ 194/2024 (ಕಲಂ 22(ಸಿ) ಎನ್‌ಡಿಪಿಎಸ್) ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಮಂಡಿ ಠಾಣಾ ಇನ್‌ಸ್ಪೆಕ್ಟರ್ ದಿವಾಕರ್ ಆರ್., ಪಿಎಸ್‌ಐ ರಾಜು ಕೋನಕೇರಿ ಹಾಗೂ ಇತರ ಸಿಬ್ಬಂದಿ ಪಾಲ್ಗೊಂಡಿದ್ದರು. ಮೈಸೂರು ನಗರ ಪೊಲೀಸ್ ಆಯುಕ್ತರು ಮತ್ತು ಉಪ ಆಯುಕ್ತರು ಈ ಅಧಿಕಾರಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

ಪೊಲೀಸರು ಉಳಿದ ಆರೋಪಿಗಳ ಪತ್ತೆಗೆ ಮತ್ತು ಮಾದಕ ವಸ್ತುಗಳ ಮೂಲಕ್ಕೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಮಾದಕವಸ್ತು ಮುಕ್ತ ನಗರ ನಿರ್ಮಾಣಕ್ಕಾಗಿ ಪೊಲೀಸ್ ಇಲಾಖೆಯು ನಿರಂತರ ಕಾರ್ಯಾಚರಣೆಗಳನ್ನು ಮುಂದುವರಿಸುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

39 mins ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

52 mins ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

6 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

7 hours ago